ಸಾರ್ವಜನಿಕರ ಹಿತದೃಷ್ಠಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವುದು ಅಗತ್ಯವಾಗಿರುವುದರಿಂದ ಜಿಲ್ಲೆಯಲ್ಲಿರುವ ಒಟ್ಟು 50 ದ್ವೀಪಗಳಿಗೆ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು ಪ್ರವೇಶಿಸದಂತೆ ಹಾಗೂ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದು, ಸದ್ರಿ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್ 223 ರಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
previous post