ಮೂಡುಬಿದಿರೆ ಗಂಟಾಲ್ಕಟ್ಟೆಯ ಜಲೀಲ್ ಎಂಬವರ ಮನೆ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಜಾನುವಾರು ಕಡಿದು ಮಾಂಸ ಮಾಡುತ್ತಿರುವ ಆರೋಪದ ಮೇಲೆ ಮೂಡುಬಿದಿರೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ದಾಳಿ ನಡೆಸಿ ಮಾಂಸ ಸಹಿತ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿ ನಡೆಸಿದಾಗ ಮಾಂಸ 50ಕೆ.ಜಿ., ಮಾಂಸ ಮಾಡಲು ಕದ್ದು ತಂದಿದ್ದ 3 ದನಗಳನ್ನು ವಶಕ್ಕೆ ಪಡೆಯಲಾಗಿದೆ. ದನಗಳನ್ನು ಗೋಶಾಲೆಗೆ ಒಪ್ಪಿಸಲಾಗಿದೆ.

ಆರೋಪಿಗಳಾದ ಜಲೀಲ್ ಕಲ್ಲಬೆಟ್ಟು, ಸಾಹಿಲ್, ಆತನ ಪುತ್ರ ಸೊಹೇಲ್, ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಪೊಲೀಸ್ ದಾಳಿ ಸಂದರ್ಭ ಪರಾರಿಯಾಗಿದ್ದಾರೆ.


2 ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ನೇತೃತ್ವದಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಕೃಷ್ಣಪ್ಪ, ಅಖಿಲ್ ಅಹಮ್ಮದ್, ನಾಗರಾಜ್ ಕಾರ್ಯಾಚರಣೆ ನಡೆಸಿದ್ದಾರೆ.
