ಕಾರ್ಕಳ

ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ಕಾರು ಡಿಕ್ಕಿ- ಪಾದಚಾರಿ ಮೃತ್ಯು

ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ಕಾರು ಡಿಕ್ಕಿಯಾಗಿ ಪಾದಚಾರಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ. ೦೫ರಂದು ವರದಿಯಾಗಿದೆ.


ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿದ್ದ ಕಾರನ್ನು ಚಾಲಕ ರಕ್ಷಣ್ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ನಡೆದುಕೊಂಡು ಹೋಗುತ್ತಿದ್ದ ಸುರೇಶರವರಿಗೆ ಹಿಂದಿನಿಂದ ಡಿಕ್ಕಿ ಹೊಡೆದು, ರಸ್ತೆಯ ಬದಿ ಇದ್ದ ಮರಕ್ಕೆ ಡಿಕ್ಕಿಯಾಗಿ ಕಾರು ಮಗುಚಿ ಬಿದ್ದಿದೆ.
ಡಿಕ್ಕಿಯ ರಭಸಕ್ಕೆ ಸುರೇಶ್‌ರವರು ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಯ ಮಧ್ಯೆ ಮೃತಪಟ್ಟಿದ್ದಾರೆ. ಕಾರಿನ ಚಾಲಕ ರಕ್ಷಣ್ ಹಾಗೂ ಕಾರಣಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುತ್ತದೆ.

ಗಾಯಗೊಂಡವರು ಕಾರ್ಕಳ, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರಿಷಿಕಾ ಕುಂದೇಶ್ವರಗೆ ಸಿಎಂ ಮೆಚ್ಚುಗೆ

Madhyama Bimba

ನೀರೆ: ಬೈಕ್‌ಗೆ ಕಾರು ಡಿಕ್ಕಿ- ಬೈಕ್ ಸವಾರ ಸಾವು

Madhyama Bimba

ಮತದಾರರ ಪಟ್ಟಿ ಪರಿಷ್ಕರಣೆ: ಹೊಸ ನೋಂದಣಿಗೆ ಅವಕಾಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More