ಕಾರ್ಕಳಹೆಬ್ರಿ

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ, ಮಾಸಿಕ 10,000 ರೂ. ಗಳಂತೆ ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸಬಯಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿ.ಆರ್.ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾ.ಪಂ. ವಿವರ: ಉಡುಪಿ ತಾಲೂಕಿನ ಕೆಮ್ಮಣ್ಣು, ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ ಹಾರಾಡಿ, ಕೋಡಿ, ಹೆಗ್ಗುಂಜೆ ಹಾಗೂ ಪಾಂಡೇಶ್ವರ, ಹೆಬ್ರಿ ತಾಲೂಕಿನ ಶಿವಪುರ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಕೆರಾಡಿ, ಕಾರ್ಕಳ ತಾಲೂಕಿನ ನಿಟ್ಟೆ ಹಾಗೂ ಪಳ್ಳಿ. ಯು.ಆರ್.ಡಬ್ಲ್ಯೂ ನೇಮಕಾತಿಗಾಗಿ ಕುಂದಾಪುರ ಪುರಸಭೆ.


ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು, ತಮ್ಮ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಡಿಸೆಂಬರ್ 10ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್.ಡಬ್ಲ್ಯೂ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ನಿಟ್ಟೆ ಡಾ. ವಿನಯ ಹೆಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

Madhyama Bimba

ಶಿವಪುರ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Madhyama Bimba

ಕಾರ್ಕಳ ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಹಾಗೂ ವಿದ್ಯಾರ್ಥಿ ವೇತನ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More