ಕಾರ್ಕಳ

ಕಾರ್ಕಳ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮ

ಕಾರ್ಕಳ: ಕರ್ನಾಟಕ ಸರ್ಕಾರ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಸರಕಾರಿ ಶುಶ್ರೂಷ ಮಹಾವಿದ್ಯಾಲಯ ಕಾರ್ಕಳ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ ಶಾಖೆ ಮತ್ತು ರೋಟರಿ ಕ್ಲಬ್ ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ – 2025ರ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಕಳದಲ್ಲಿ ಜರುಗಿತು.

ಜನಜಾಗೃತಿ ಜಾಥಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಾರ್ಕಳದಿಂದ ಪ್ರಾರಂಭವಾಗಿ ಬಸ್ ಸ್ಟ್ಯಾಂಡ್ ಸರ್ಕಲ್, ನಂತರ ಅನಂತಶಯನ ಸರ್ಕಲ್ ಮೂಲಕ ಸಾಗುತ್ತಾ ಪುನಃ ಆಸ್ಪತ್ರೆ ಆವರಣಕ್ಕೆ ತಲುಪಿತು. ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು, ಸ್ವಯಂಸೇವಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದರು.

ಕಾರ್ಯಕ್ರಮವನ್ನು ಕಾರ್ಕಳ ಹಿರಿಯ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಧೀಶರು, ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಶ್ರೀಮತಿ ಶರ್ಮಿಳಾ ಸಿ.ಎಸ್. ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಕಾರ್ಕಳ ಪ್ರಧಾನ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಧೀಶರಾದ ಕುಮಾರಿ ಕೋಮಲ ಆರ್.ಸಿ., ಕಾರ್ಕಳ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಶ್ರೀಮತಿ ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ. ಸಂದೀಪ್ ಕುಡ್ವ, ಕಾರ್ಕಳ ಶಾಖಾ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಡಾ. ಕೆ.ಆರ್. ಜೋಶಿ, ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷರಾದ ಕೆ. ನವೀನ್ ಚಂದ್ರ ಶೆಟ್ಟಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಶಿಕಲಾ, ಸರಕಾರಿ ಶುಶ್ರೂಷ ಮಹಾವಿದ್ಯಾಲಯದ ಪ್ರಾಚಾರ್ಯೆ ಶ್ರೀಮತಿ ಸಜನಿ ಸುಬ್ರಮಣ್ಯ, ಪುರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ಲೈಲಾ ಥಾಮಸ್, ಉಪನ್ಯಾಸಕ ಶ್ರೀಧರ್ ಪ್ರಭು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕಾರ್ಕಳ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಸುಶೀಲ ಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಕ್ರೈಸ್ಟ್‌ಕಿಂಗ್: ಪ್ರೌಢ ಶಾಲಾ ವಾರ್ಷಿಕೋತ್ಸವ

Madhyama Bimba

ಕಾರ್ಕಳ ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ, ಹಾಗೂ ವಿದ್ಯಾರ್ಥಿ ವೇತನ ವಿತರಣೆ

Madhyama Bimba

ಪಂಚಾಯತ್ ನೌಕಕರ ಮುಷ್ಕರ: ಜನಸೇವೆಯಲ್ಲಿ ವ್ಯತ್ಯಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More