ಕಾರ್ಕಳಹೆಬ್ರಿ

ಪ್ರಬಲ ಇಚ್ಛಾಶಕ್ತಿ ಹಾಗೂ ಕಠಿಣ ಪರಿಶ್ರಮ ಸಾಧನೆಯ ಸೂತ್ರಗಳು: ಎಚ್. ನಾಗರಾಜ್ ಶೆಟ್ಟಿ

ಹೆಬ್ರಿ: ಎಸ್. ಆರ್ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ನಡೆದ ಸಿಎ ಮತ್ತು ಸಿಎಸ್ ಕಾರ್ಯಾಗಾರ ನಡೆಯಿತು.


ಎಚ್. ನಾಗರಾಜ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪ್ರಬಲ ಇಚ್ಛಾಶಕ್ತಿ ಮತ್ತು ಕಠಿಣ ಪರಿಶ್ರಮದಿಂದ ಮಾತ್ರ ಸಾಧನೆಯ ಗುರಿ ತಲುಪಲು ಸಾಧ್ಯ ಎಂದು ಹೇಳಿದರು.


ಸಂಪನ್ಮೂಲ ವ್ಯಕ್ತಿಗಳಾದ “ವಿ ರೀಚ್ ಅಕಾಡೆಮಿ ಉಡುಪಿ”ಯ ಸ್ಥಾಪಕರಾದ ಸಿ. ಎಸ್ ಸಂತೋಷ್ ಪ್ರಭುರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಗಾರವನ್ನು ನಡೆಸಿಕೊಟ್ಟರು.


ಸಂಸ್ಥೆಯ ಕಾರ್ಯದರ್ಶಿಯವರಾದ ಸಪ್ನ ಎನ್. ಶೆಟ್ಟಿ, ಸಿಎಸ್‌ಐಎಸ್ ಮಂಗಳೂರು ಚಾಪ್ಟರನ ಶಂಕರ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಅಮೃತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ೫ನೇ ರ್‍ಯಾಂಕ್ ಗಳಿಸಿದ ಅನನ್ಯ ರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳಾದ ಖಾಝಿ ಇಲ್ಹಮ್ ಕಾರ್ಯಕ್ರಮ ನಿರೂಪಿಸಿ, ವೈಷ್ಣವಿ ಸ್ವಾಗತಿಸಿ, ತನುಶ್ರೀ ವಂದಿಸಿದರು.

Related posts

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3 ಮಂಗಳವಾರದಂದು ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Madhyama Bimba

ನೀರೆ ಗ್ರಾಮ ಪಂಚಾಯತ್‌ನಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ: ರೂ.1200 ಕೋಟಿ ವ್ಯವಹಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More