ಕಾರ್ಕಳಹೆಬ್ರಿ

ಹೆಬ್ರಿ: ಅಕ್ರಮಸಕ್ರಮ ಅರ್ಜಿಗಳು ವಿಲೇವಾರಿಗೆ ಬಾಕಿ-ಅರಣ್ಯ ಇಲಾಖೆಯ ಸಮಸ್ಯೆ- ಜಂಟಿ ಸರ್ವೆ ಆರಂಭ

ಹೆಬ್ರಿ : ಹೆಬ್ರಿ ತಾಲ್ಲೂಕಿನಲ್ಲಿ ಅಕ್ರಮ ಸಾಗುವಳಿದಾರರಿಗೆ ತಮ್ಮ ಜಮೀನುಗಳ ಪಟ್ಟಾ ಹಕ್ಕುಪತ್ರ ನೀಡಲು ಸರ್ಕಾರ ಮತ್ತು ಉಡುಪಿ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಡಿ. 02ರಂದು ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಭೂ ಮಾಪನಾ ಮತ್ತು ಭೂದಾಖಲೆಗಳ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೆಯನ್ನು ಆರಂಭಿಸಿದ್ದಾರೆ.


ಉಡುಪಿ ಜಿಲ್ಲೆ ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದಲ್ಲಿ 150 ಮತ್ತು ಹೆಬ್ರಿ ಗ್ರಾಮದ  100ಕ್ಕಿಂತ ಹೆಚ್ಚಿನ ಅಕ್ರಮಸಕ್ರಮದಲ್ಲಿ ಸಲ್ಲಿಸಿದ ಅರ್ಜಿ ನಮೂನೆ 50,53 ಮತ್ತು 57ರ ಫಲಾನುಭವಿಗಳಿಗೆ ಅರಣ್ಯಮತ್ತು ಕಂದಾಯ ಇಲಾಖೆಯ ಭೂಮಿಯನ್ನು ಜಂಟಿ ಸರ್ವೆ ನಡೆಸಿ ಪಟ್ಟಾ ಪತ್ರವನ್ನು ದೊರಕುವಂತೆ ಆದೇಶ ನೀಡುವಂತೆ ಸಮಾಜಿಕ ಹೋರಾಟಗಾರರಾದ ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ಹೆಬ್ರಿ ಕಾರ್ಕಳದ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿಯವರು ಸಾಮಾಜಿಕ ಹೊಣೆಗಾರಿಕೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಕಂದಾಯ, ಅರಣ್ಯ ಇಲಾಖೆಯ ಸಚಿವರಿಗೆ ಇತ್ತೀಚೆಗೆ ಮನವಿ ನೀಡಿದ್ದರು.


ಪರಭಾದಿತ ಅರಣ್ಯ ಪ್ರದೇಶವಿದ್ದಲ್ಲಿ, ಅದಕ್ಕೆ ಹೊಂದಿಕೊಂಡಿರುವ ಸರ್ವೆ ನಂಬ್ರಗಳಲ್ಲಿ ಗೊಂದಲಗಳಿದ್ದರೆ ಕಂದಾಯ ಇಲಾಖೆಯಿಂದ ಪ್ರಸ್ತಾವನೆಯನ್ನು ನಿಯಮನುಸಾರ ಮುಂದಿನ ಕ್ರಮಕ್ಕಾಗಿ ಅರಣ್ಯ ಇಲಾಖೆಗೆ ಕಳುಹಿಸುವಂತೆ ರಾಜ್ಯದ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರು ಈಗಾಗಲೇ ನಿರ್ದೇಶನ ನೀಡಿದ್ದಾರೆ ಎಂದು ನೀರೆ ಕೃಷ್ಣ ಶೆಟ್ಟಿಯವರು ತಿಳಿಸಿದರು.


ಹೆಬ್ರಿ ತಾಲ್ಲೂಕಿನ ನಾಡ್ಪಾಲು ಗ್ರಾಮದ ಸರ್ವೆ ನಂಬ್ರ 126ರಲ್ಲಿ 28,205ಎಕರೆ, ಹೆಬ್ರಿ ಗ್ರಾಮದ ಸರ್ವೆ ನಂಬ್ರ 210ರಲ್ಲಿ 2,238 ಎಕರೆ ಸೇರಿ ಒಟ್ಟು 30,343ಎಕರೆ ವಿಸ್ತೀರ್ಣವಿದೆ. ಆದರೆ ಹೆಬ್ರಿ ವಲಯದ ಅರಣ್ಯ ದಾಖಲೆಗಳ ಪ್ರಕಾರ 26,653 ಎಕರೆ ಮಾತ್ರ ಅರಣ್ಯ ಪ್ರದೇಶವಾಗಿದ್ದು ಉಳಿಕೆಯ 1550 ಎಕರೆಗೂ ಹೆಚ್ಚಿನ ಕಂದಾಯ ಅನಾಧೀನ ಭೂಮಿಗಳು 2 ಸರ್ವೆ ನಂಬರ್‌ಗಳಲ್ಲಿ ಅಡಕವಾಗಿದೆ.


ಹೆಬ್ರಿ ತಾಲ್ಲೂಕಿನ ಹೆಬ್ರಿ ಮತ್ತು ನಾಡ್ಪಾಲು ಗ್ರಾಮದ ಸರ್ವೆ ನಂಬರ್ ಗಳ ಜಮೀನುಗಳನ್ನು ಜಂಟಿ ಸರ್ವೆ ನಡೆಸಿದರೆ ಅರಣ್ಯ ಇಲಾಖೆಯ ತಾಂತ್ರಿಕ ಸಮಸ್ಯೆಗಳಿಂದ 50-60 ವರ್ಷಗಳಿಂದ ಸಾಗುವಾಳಿ ಮಾಡಿಕೊಂಡು ತಮ್ಮ ಜಾಗದ ಹಕ್ಕುಪತ್ರಕ್ಕಾಗಿ ಎದುರು ನೋಡುತ್ತಿರುವ ಮನೆಮಂದಿಗೆ ನ್ಯಾಯ ದೊರೆಯುವ ಮೂಲಕ ಬಡ ಕೃಷಿಕರಿಗೆ ಶೀಘ್ರವಾಗಿ ಅಕ್ರಮಸಕ್ರಮ ಕಾಯ್ದೆಯಂತೆ ಪಟ್ಟಾ ಪತ್ರ ನೀಡಲು ಅವಕಾಶವಿದೆ ಎಂದು ಅಕ್ರಮ ಸಕ್ರಮ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿರುವ ನೀರೆ ಕೃಷ್ಣ ಶೆಟ್ಟಿಯವರು ಹೇಳಿದ್ದಾರೆ.

ಕಂದಾಯ ಇಲಾಖೆ, ಅರಣ್ಯ ಇಲಾಖೆ ಮತ್ತು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು, ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯ ಅಧಿಕಾರಿಗಳು ಜಂಟಿ ಸರ್ವೆ ಕಾರ್ಯದಲ್ಲಿ ಭಾಗಿಯಾದರು.
…..
ನಿರಂತರ ಹೋರಾಟದ ಫಲ : ಅಕ್ರಮ ಸಾಗುವಾಳಿದಾರರಿಗೆ ಅರಣ್ಯ ಇಲಾಖೆಯ ಸಮಸ್ಯೆಯ ಸಮಸ್ಯೆಯಿಂದಾಗಿ ಹಲವು ವರ್ಷಗಳಿಂದ ಹಕ್ಕುಪತ್ರ ದೊರೆಯದೆ ಸಮಸ್ಯೆಯಾಗಿತ್ತು. ಇದೀಗ ಹಲವು ಹೋರಾಟದ ಬಳಿಕ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಇದರಿಂದ ಮುಂದೆ ನೂರಾರು ಮನೆಮಂದಿಗೆ ಸಹಾಯವಾಗಲಿದೆ. ಬಹುತೇಕ ಮಂದಿಗೆ ತಮ್ಮ ಜಮೀನಿಗೆ ಪಟ್ಟಾ ದೊರಯಲಿದೆ.


– ನೀರೆ ಕೃಷ್ಣ ಶೆಟ್ಟಿ.
ಸಾಮಾಜಿಕ ಹೋರಾಟಗಾರ.
….
ಸರ್ಕಾರ ಮತ್ತು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಜಂಟಿ ಸರ್ವೆ ನಡೆಯುತ್ತಿದೆ. ನಾಡ್ಪಾಲಿನ ಬಳಿಕ ವರಂಗ, ಶಿವಪುರ, ಅಂಡಾರು ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲೂ ಜಂಟಿ ಸರ್ವೆ ನಡೆಯಲಿದೆ. ಅರಣ್ಯ ಇಲಾಖೆಯ ಕ್ಲೀಯರೆನ್ಸ್ ಬಳಿಕ ಅಕ್ರಮಸಕ್ರಮ ಅರ್ಜಿಗಳ ವಿಲೇವಾರಿ ಸೇರಿದಂತೆ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ದೊರೆಯಲಿದೆ.
– ಎಸ್.ಎ.ಪ್ರಸಾದ್.
ತಹಶೀಲ್ಧಾರ್ ಹೆಬ್ರಿ ತಾಲ್ಲೂಕು.

 

 

Related posts

ರಾಜಕಾರಣದ ಸಭ್ಯತೆಯ ಎಲ್ಲೆ ಮೀರುತ್ತಿರುವ ಉದಯಕುಮಾರ್ ಶೆಟ್ಟಿ : ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಆಕ್ರೋಶ

Madhyama Bimba

ರಿಕ್ಷಾಕ್ಕೆ ಇನೋವಾ ಕಾರು ಡಿಕ್ಕಿ- ರಿಕ್ಷಾ ಚಾಲಕನಿಗೆ ಅಲ್ಪ ಪ್ರಮಾಣದ ಗಾಯ

Madhyama Bimba

ಹೆಬ್ರಿ ಅಮೃತಭಾರತಿ ವಿದ್ಯಾಲಯದ ಆರು ಸಂಸ್ಕೃತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More