ಕಾರ್ಕಳ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನಿಂದ ಸ್ವಚ್ಛತಾ ಅಭಿಯಾನ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇದರ ಸಹಯೋಗದಲ್ಲಿ ಅಬ್ಬನಡ್ಕ – ಇಟ್ಟಮೇರಿ ಸಂಪರ್ಕ ರಸ್ತೆಯಿಂದ ಬೆಳ್ಮಣ್ಣು ಶ್ರೀ ದಉರ್ಗಾಪರಮೇಶ್ವರಿ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿದ್ದ ಹುಲ್ಲು-ಗಿಡಗಂಟಿ-ಪೊದೆ ಕಡಿದು ಸ್ವಚ್ಛ ಮಾರ್ಗಂ ಕಾರ್ಯಕ್ರಮದ ಮೂಲಕ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಕೋಶಾಧಿಕಾರಿ ಪ್ರದೀಪ್ ಸುವರ್ಣ ಕೆಮ್ಮಣ್ಣು, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಧ್ಯಕ್ಷರಾದ ಕೀರ್ತನ್ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ಸುಭಾಸ್ ಕೆಮ್ಮಣ್ಣು, ಕಿರಣ್ ಶೆಟ್ಟಿ, ಅಭಿಷೇಕ್ ಕುಲಾಲ್, ಮೊದಲಾದವರಿದ್ದರು.

Related posts

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba

ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ

Madhyama Bimba

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಅಪರೂಪದ ಹೃದಯ ಕಾಯಿಲೆಗೆ ಕನಿಷ್ಠ ಆಕ್ರಮಣಕಾರಿ (ಕನಿಷ್ಠ ಗಾಯ)ತಂತ್ರವನ್ನು ಬಳಸಿಕೊಂಡು ಯಶಸ್ವಿ ಚಿಕಿತ್ಸೆ – ಸಂಕೀರ್ಣವಾದ ಹೃದಯ ಕಾಯಿಲೆಯಾದ ರಪ್ಚರ್ಡ್ ಸೈನಸ್ ಆಫ್ ವಲ್ಸಲ್ವಾ ಅನ್ಯೂರಿಸಮ್ ಅನ್ನು ಸುಧಾರಿತ ಕನಿಷ್ಠ ಆಕ್ರಮಣಕಾರಿ ವಿಧಾನದ ಮೂಲಕ ಚಿಕಿತ್ಸೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More