ಕಾರ್ಕಳಹೆಬ್ರಿ

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಿಗಮದ ಯೋಜನೆಗಳಾದ ಉದ್ಯೋಗಿನಿ ಯೋಜನೆ ಹಾಗೂ ಚೇತನಾ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಹಾಗೂ ಧನಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಯಡಿ ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಯೋಜನೆಗಳಡಿ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಅರ್ಜಿಗಳನ್ನು ನಿಗದಿಪಡಿಸಿದ ಅವಧಿಯೊಳಗೆ, ಅಗತ್ಯ ದಾಖಲಾತಿಗಳೊಂದಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಡಿಸೆಂಬರ್ 15 ರ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.


ಸರ್ಕಾರದ ವಿವೇಚನಾ ಕೋಟಾ ಹಾಗೂ ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಚಿವರು/ಶಾಸಕರು, ಕರ್ನಾಟಕ ಸರ್ಕಾರ/ಅಧ್ಯಕ್ಷರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು, ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ ನಂ.204, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ:0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

 

Related posts

ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

ಸನ್‌ಮಾರ್ಗ್ ಎನರ್ಜಿಸ್ ಕಾರ್ಕಳದಲ್ಲಿ ಶುಭಾರಂಭ

Madhyama Bimba

ನಿವೃತ್ತ ಶಿಕ್ಷಕರಾದ ಕೃಷ್ಣ ಶೆಟ್ಟಿ ಚಿಕ್ಕಾಡಿ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More