ಕಾರ್ಕಳ

ಶ್ರೀ ರವಿಶಂಕರ ವಿದ್ಯಾ ಮಂದಿರದ ವಾರ್ಷಿಕೋತ್ಸವ

ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಡಿ. 12 ರಂದು ಶಾಲಾ ವಾರ್ಷಿಕೋತ್ಸವ ನಡೆಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರರಾದ ಪ್ರದೀಪ್ ಆರ್ ಹಾಗೂ ಉಪ ಅರಣ್ಯ ಅಧಿಕಾರಿಗಳಾದ ಸುಧೀರ್ ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಕ್ಕಳಿಗೆ ಸಮಯೋಚಿತ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿ, ಶಾಲೆಯ ಅಭಿವೃದ್ಧಿಗೆ ಹಾರೈಸಿದರು.


ಆಡಳಿತ ಮಂಡಳಿ ಅಧ್ಯಕ್ಷರಾದ ಡಾ. ಪ್ರಶಾಂತ್ ಹೆಗ್ಡೆಯವರು ಅಧ್ಯಕ್ಷತೆ ವಹಿಸಿ ಶಾಲಾ ಅಭಿವೃದ್ಧಿಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.

ಈ ಸಭಾ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ಸೋನಾಲ್ ಆರ್.ಕಾಮತ್, ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಕೆ, ಶಾಲಾ ಅಧ್ಯಕ್ಷರಾದ ಪ್ರಶಾಂತ್ ಹೆಗ್ಡೆ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ವಿನಾಯಕ ಜಿ.ಕುಡ್ವ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಾಧಕ ಮಕ್ಕಳಿಗೆ ಅಭಿನಂದಿಸಲಾಯಿತು.

ಶಾಲಾ ಪ್ರಾಂಶುಪಾಲರು ವಾರ್ಷಿಕ ವರದಿಯನ್ನು ವಾಚಿಸಿದರು.
ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಆರ್ಟ್ ಆಫ್ ಲಿವಿಂಗ್ ನ ವಿಭಿನ್ನ ಯೋಗ ಪ್ರಕ್ರಿಯೆಯಾದ ಪ್ರಜ್ಞಾ ಯೋಗದ ಪ್ರದರ್ಶನವು ನಡೆಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಶ್ರೀ ಶ್ರೀ ರವಿಶಂಕರ ಟ್ರಸ್ಟ್‌ನ ಅಂತರಾಷ್ಟ್ರೀಯ ಯೋಗ ತಜ್ಞರಾದ ರಮ್ಯ ರಾಜಶೇಖರ್ ಹಾಗೂ ಶಾರದ ಇವರು ನಡೆಸಿಕೊಟ್ಟರು.

ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಡಿ. 11ರಂದು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿ- ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಪ್ರಶಾಂತ್ ಹೆಗ್ಡೆ, ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್. ಕಾಮತ್, ಉಪ ಪ್ರಾಂಶುಪಾಲರಾದ ಶ್ರೀಮತಿ ಸುಜಾತ.ಕೆ ಮಕ್ಕಳಿಗೆ ಬಹುಮಾನವನ್ನು ನೀಡಿ ಪ್ರೋತ್ಸಾಹಿಸಿದರು.

 

 

 

Related posts

ಕಾರ್ಕಳ: ಗ್ರಾಹಕರ ಮನಗೆಲ್ಲಲು ಸಜ್ಜಾದ ‘ಎನ್‌ಪಿ ಚಿಲ್ ಸ್ಟೇಷನ್’ ಎಸಿ ಐಸ್‌ಕ್ರೀಮ್ ಪಾರ್ಲರ್ ಉದ್ಘಾಟನೆ

Madhyama Bimba

ಕೆ.ಸಿ.ಇ.ಟಿ ಫಲಿತಾಂಶ: ಕಾರ್ಕಳದ ಕ್ರಿಯೇಟಿವ್ ಕಾಲೇಜು ಅತ್ಯುತ್ತಮ ಸಾಧನೆ- ಕಾಲೇಜಿನ 30 ವಿದ್ಯಾರ್ಥಿಗಳಿಗೆ 100ರ ಒಳಗೆ ರ್‍ಯಾಂಕ್- ನಾಗದೇವ್ ಎಂ. ಜಿ ಇಂಜಿನಿಯರಿಂಗ್ ವಿಭಾಗದಲ್ಲಿ 28ನೇ ರ್‍ಯಾಂಕ್

Madhyama Bimba

ಕಾರ್ಕಳ ರೋಟರಿ ಕ್ಲಬ್ ವತಿಯಿಂದ “ದೇವರ ಮಕ್ಕಳೊಂದಿಗೆ ನಮ್ಮ ಸಮಯ” ವಿಶೇಷ ಸೇವಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More