ಕಾರ್ಕಳ

ಕ್ರಿಯೇಟಿವ್ ಉಡುಪಿ ಶಾಖೆಯ ಹೊಂಗಿರಣ ಉಚಿತ ಶಿಕ್ಷಣಕ್ಕೆ ಬೆಳಗಾವಿಯಲ್ಲಿ ಅರ್ಹತಾ ಪರೀಕ್ಷೆ

ಕ್ರಿಯೇಟಿವ್ ಸಂಸ್ಥೆ ಸಮಾಜದ ಎಲ್ಲಾ ಸ್ತರದ ವಿದ್ಯಾರ್ಥಿಗಳಿಗೂ ಉನ್ನತ ವ್ಯವಸ್ಥೆಯಡಿಯಲ್ಲಿ ಪಿ. ಯು. ಶಿಕ್ಷಣ ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ದೊರಕಿಸಿಕೊಡಬೇಕೆಂಬ ಮಹಾದಾಸೆಯಿಂದ ‘ಕ್ರಿಯೇಟಿವ್ ಹೊಂಗಿರಣ’ ಯೋಜನೆಯನ್ನು ರೂಪಿಸುತ್ತಿದೆ.


ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಈ ಯೋಜನೆಯ ಅರ್ಹತಾ ಪರೀಕ್ಷೆಯನ್ನು ದಿನಾಂಕ 21-12-2025 ಭಾನುವಾರದಂದು ಅಥಣಿಯ ಶ್ರೀ ಶಾರದಾ ಮಾತಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ (ನವೋದಯ ಶಾಲೆ) ಕನಕನಗರ ಮತ್ತು 28-12-2025 ಭಾನುವಾರದಂದು ಸರ್ಕಾರಿ ಪ್ರೌಢ ಶಾಲೆ, ಚಿಕ್ಕೋಡಿ ಬಿ.ಓ. ಕಛೇರಿ ಆವರಣ, ತಾಲೂಕು ಪಂಚಾಯತ್ ಎದುರು(ತಾಲೂಕು ಶಾಲೆ), ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಶಾಲೆಗಳು( ಬ್ಯಾಳಿ ಕಟ್ಟ) ವಾಲ್ಮೀಕಿ ವೃತ್ತ, ಗೋಕಾಕ್ ಹಾಗೂ ಕನಕದಾಸ ಶಿಕ್ಷಣ ಸಮಿತಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಿಕ್ಷಣ ಮಹಾವಿದ್ಯಾಲಯ(ವಿ.ಎಡ್, ಕಾಲೇಜು) ನೆಹರು ನಗರ, ಬೆಳಗಾವಿಯಲ್ಲಿ ಆಯೋಜಿಸಲಾಗಿದೆ.


ಆಯ್ಕೆಯಾದ 150 ಅರ್ಹ ವಿದ್ಯಾರ್ಥಿಗಳು ಕ್ರಿಯೇಟಿವ್ ಸಂಸ್ಥೆಯ ಉಡುಪಿ ಶಾಖೆಯಲ್ಲಿ ಸಂಪೂರ್ಣ ಉಚಿತ ಶಿಕ್ಷಣ ಅಥವಾ ಪ್ರೋತ್ಸಾಹ ಧನದೊಂದಿಗೆ ಪಿ. ಯು ಶಿಕ್ಷಣ ಪಡೆಯುವ ಅವಕಾಶವಿರುತ್ತದೆ. ಈ ಯೋಜನೆಗೆ ವಿಜ್ಞಾನ ವಿಭಾಗ ಸೇರಲಿಚ್ಛಿಸುವ ಯಾವುದೇ ವಿದ್ಯಾರ್ಥಿ www.creativeedu.in ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ನೇರವಾಗಿ ಸಮಯ 9.30ಕ್ಕೆ ಸರಿಯಾಗಿ ತಮ್ಮ ಹತ್ತಿರದ ಪರೀಕ್ಷಾ ಕೇಂದ್ರಕ್ಕೆ ಬಂದು ಹಾಜರಾಗಬಹುದು ಎಂದು ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +919606906468

 

Related posts

ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Madhyama Bimba

ಕಾರ್ಕಳ: ರಸ್ತೆ ಬದಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕಳವು

Madhyama Bimba

ಪಡುಕುಡೂರು : ವಾತ್ಸಾಲ್ಯ ಕಿಟ್ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More