ಕಾರ್ಕಳ

ಕಾರ್ಕಳ: ಬೆಳ್ಮಣ್ ಬಳಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿ- ಗಾಯ

ಕಾರ್ಕಳ: ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 20ರಂದು ವರದಿಯಾಗಿದೆ.


ದಾವಣಗೆರೆ ನಿವಾಸಿ ಬಸವರಾಜಪ್ಪ (45) ಗಾಯಗೊಂಡವರು.
ಬಸವರಾಜಪ್ಪರವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಸವಾರನು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ಪರಿಣಾಮ ಪಾದಚಾರಿ ಮಣ್ಣು ರಸ್ತೆಗೆ ಬಿದ್ದು ಗಾಯವಾಗಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ನಂತರ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರೋಟರಿ ಕ್ಲಬ್ ಕಾರ್ಕಳ ಮತ್ತು ರೋಟರಿ ಕ್ಲಬ್ ಮೂಡಬಿದ್ರಿ ಅಂತರ್ ಜಿಲ್ಲಾ ಜಂಟಿ ಸಭೆ

Madhyama Bimba

ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ

Madhyama Bimba

ಡಿ. 28: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ 21ನೇ ಕನ್ನಡ ಸಾಹಿತ್ಯ ಸಮ್ಮೇಳನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More