ಕಾರ್ಕಳಹೆಬ್ರಿ

ಶಿವಪುರ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸರಕಾರಿ ಪ್ರೌಢ ಶಾಲೆ ಶಿವಪುರ ಇಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಡಿ. 24ರಂದು ನೆರವೇರಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ರಾಘವೇಂದ್ರ ಅಡಿಗ ವಹಿಸಿದ್ದು, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವಿಶಂಕರ್ ರಾವ್ ಶಿವಪುರ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶಂಕರ ಬಡ್ಕಿಲ್ಲಾಯ, ತಾಲೂಕು ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷರಾದ ರಮೇಶ್ ಕುಮಾರ್ ಶಿವಪುರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸರ್ಕಾರಿ ಪ್ರೌಢಶಾಲೆ ಶಿವಪುರ ಇಲ್ಲಿನ ಹಳೆ ವಿದ್ಯಾರ್ಥಿಗಳಾದ ಡಾ. ಗೋಪಾಲ ಪೂಜಾರಿ ಹಾಗೂ ರವಿರಾಜ್ ಶೆಟ್ಟಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಮುಖ್ಯೋಪಾಧ್ಯಾಯರಾದ ಶ್ರೀಮತಿ ಶರ್ಮಿಳ ಸ್ವಾಗತಿಸಿ, ಶಿಕ್ಷಕರಾದ ರಾಜೇಶ್ ನಾಯಕ್ ವಂದಿಸಿದರು. ಕನ್ನಡ ಶಿಕ್ಷಕರಾದ ಗಣೇಶ್ ಮರಕಾಲ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ದಾನಿಗಳು ಕೊಡ ಮಾಡುವ ದತ್ತಿ ನಿಧಿ ಪುರಸ್ಕಾರಗಳನ್ನು ವಿತರಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Related posts

ಕ್ರೈಸ್ಟ್‌ಕಿಂಗ್: ಪ್ರತಿಭಾ ಕಾರಂಜಿಯ ಭಾವಗೀತೆ ಸ್ಪರ್ಧೆಯಲ್ಲಿ ಅಕ್ಷರ್ ಕುಮಾರ್ ಜಿಲ್ಲಾಮಟ್ಟಕ್ಕೆ ಆಯ್ಕೆ

Madhyama Bimba

ಜ್ಞಾನಸುಧಾ ಸಂಸ್ಥೆಗಳಲ್ಲಿ “ಸಂಸ್ಥಾಪಕರ ದಿನಾಚರಣೆ” ಹಾಗೂ ಇತರ ಕಾರ್ಯಕ್ರಮಗಳು

Madhyama Bimba

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3 ಮಂಗಳವಾರದಂದು ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More