ಕಾರ್ಕಳ

ಜ.3ರಂದು ಮಿಯ್ಯಾರು ಲವಕುಶ ಜೋಡುಕರೆ ಕಂಬಳ

ಕಾರ್ಕಳ: ಮಿಯ್ಯಾರು ಕಂಬಳ ಸಮಿತಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಹಯೋಗದಲ್ಲಿ ಜ.3ರಂದು 22ನೇ ವರ್ಷದ ಮಿಯ್ಯಾರು ಲವ ಕುಶ ಜೋಡುಕರೆ ಕಂಬಳ ಆಯೋಜಿಸಲಾಗಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.


ಕಾರ್ಕಳ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಿಯ್ಯಾರು ಕಂಬಳವು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ವಿಶಿಷ್ಟ ಕಂಬಳವಾಗಿದ್ದು, ಸಂಪ್ರದಾಯ, ಶಿಸ್ತು ಹಾಗೂ ಸಮಯಪಾಲನೆಗೆ ಹೆಸರಾಗಿದೆ. 200ಕ್ಕೂ ಅಧಿಕ ಜೋಡಿ ಕೋಣಗಳು ಭಾಗಿಯಾಗುವ ನಿರೀಕ್ಷೆಯಿದೆ ಎಂದರು.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ್ ಭಟ್ ಬೆಳಗ್ಗೆ 8.30 ಕಂಬಳಕ್ಕೆ ಚಾಲನೆ ನೀಡಲಿದ್ದು, ಮಿಯ್ಯಾರು ಚರ್ಚ್ ವಂ| ಕ್ಯಾನ್ಸಿಟ್ ಬರ್ಬೋಜ, ಜಾಮೀಯ ಮಸೀದಿಯ ಮೌಲನಾ ರಾಜಿಕ್ ಅಹಮದ್, ಗ್ರಾ. ಪಂ. ಅಧ್ಯಕ್ಷೆ ಸನ್ಮತಿ ನಾಯಕ್, ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಭಾಗವಹಿಸಲಿದ್ದಾರೆ. ಸಂಜೆಯ ಸಭಾ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಭಾಗವಹಿಸಲಿದ್ದಾರೆ ಎಂದರು.

ಸಮಿತಿಯ ಕಾರ್ಯಾಧ್ಯಕ್ಷ ಜೀವನ್ ದಾಸ್ ಅಡ್ಯಂತಾಯ, ಉಪಾಧ್ಯಕ್ಷರಾದ ಉದಯ ಎಸ್. ಕೊಟ್ಯಾನ್, ಅಂತೋನಿ ಡಿಸೋಜಾ ನಕ್ರೆ, ತೀರ್ಪುಗಾರರಾದ ರವೀಂದ್ರ ವಿಜಯಕುಮಾರ್ ಕುಮಾರ್, ಕಂಗಿನಮನೆ, ಕೋಶಾಧಿಕಾರಿ ಶ್ಯಾಮ್ ಎನ್. ಶೆಟ್ಟಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 

 

 

 

 

Related posts

ನೀರೆ ಗ್ರಾಮ ಪಂಚಾಯತ್‌ನಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ

Madhyama Bimba

ಮುದ್ರಾಡಿ: ಶ್ರೀ ಮಂಜುನಾಥೇಶ್ವರ ನೂತನ ಸ್ವಸಹಾಯ ಸಂಘ ಉದ್ಘಾಟನೆ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ (ಲಿ.) ಮಂಗಳೂರು: ಕುಂಟಾಡಿಯಲ್ಲಿ ವೈದ್ಯಕೀಯ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More