ಕಾರ್ಕಳ

ಮೌಲ್ಯ ಸಂಗಮ ಸಮಾರೋಪ ಸಮಾರಂಭ

ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ವರ್ಷದ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ ದಾಮೋದರ ಶರ್ಮ “ಅಪ್ಪ ಅಮ್ಮನ ಮಡಿಲು” ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ ಕಾರ್ಕಳ ಕಮಲಾಕ್ಷ ಕಾಮತ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್ ವಿ ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಐ ರವೀಂದ್ರನಾಥ್ ಪೈ, ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಕೆ, ಮುಖ್ಯೋಪಾಧ್ಯಾಯರಾದ ಯೋಗೇಂದ್ರ ನಾಯಕ್, ಕಾಲೇಜಿನ ಪ್ರಾಧ್ಯಾಪಕರು, ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವಿದ್ಯಾರ್ಥಿಗಳಾದ ಕುಮಾರಿ ದೀಕ್ಷಾ ಸ್ವಾಗತಿಸಿದರು. ಮಾ. ಸುದೀಪ್ ಪರಿಚಯಿಸಿದರು. ಕುಮಾರಿ ಸಮೀಕ್ಷಾ ವಂದಿಸಿದರು, ಕುಮಾರಿ ತನ್ವಿ ನಿರೂಪಿಸಿದರು.

 

Related posts

ಕಾರ್ಕಳ: ಕುಕ್ಕುಂದೂರು ಬಳಿ ಪಾದಚಾರಿಗೆ ಕಾರು ಡಿಕ್ಕಿ- ಪಾದಚಾರಿ ಮೃತ್ಯು

Madhyama Bimba

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

Madhyama Bimba

ಪೆರ್ವಾಜೆ ಉಮಾನಾಥ ಪ್ರಭು ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More