ಕಾರ್ಕಳ

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಮ್, ಐ.ಐಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಸರ್ಕಾರದಿಂದ ಶಾಸನಬದ್ಧ ಅನುಮತಿ ಪಡೆದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu. karnataka.gov.in/seva sindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು   ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ:8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಹೆಬ್ರಿಯ ಸಾಧಕರಿಗೆ ಚೈತನ್ಯ ಪುರಸ್ಕಾರ

Madhyama Bimba

ಫೆ.25 ಕಾರ್ಕಳಕ್ಕೆ ಮುಖ್ಯಮಂತ್ರಿ ಭೇಟಿ: ಕಾರ್ಕಳ ಕಾಂಗ್ರೆಸ್ ಪೂರ್ವಭಾವಿ ಸಭೆ

Madhyama Bimba

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More