ಮೂಡುಬಿದಿರೆ

ಮೂಡುಬಿದಿರೆ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಜ.1ರಂದು ನಡೆಯಿತು.

ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ,ಜಿಲ್ಲಾ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ದೀಪ ಬೆಳಗಿಸಿ ಉದ್ಘಾಟನೆಗೈದರು. ನಂತರ ಮಾತನಾಡಿದ ಅವರು ಪತ್ರಕರ್ತರು ತಮ್ಮ ಮಾಧ್ಯಮಗಳಲ್ಲಿ ವರದಿಗಾರಿಕೆ ನಡೆಸುವುದರೊಂದಿಗೆ ಸಂಘಟಿತರಾಗಿ ತಮ್ಮ ಏಳಿಗೆಗೆ ಕಟಿಬದ್ಧರಾಗಬೇಕು ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ. ಎನ್. ಪದಗ್ರಹಣ ನೆರವೇರಿಸಿ ಮಾತನಾಡಿ ಸಂಘದ ಕಾರ್ಯ ಚಟುವಟಿಕೆಗಳಿಗೆ ಜಿಲ್ಲಾ ಸಂಘ ನಿರಂತರ ಬೆಂಬಲ ನೀಡುವುದಾಗಿ ತಿಳಿಸಿ ಶುಭ ಹಾರೈಸಿದರು.

ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.

ಮೂಡುಬಿದಿರೆ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ನವೀನ್ ಸಾಲ್ಯಾನ್ ಸಂಘದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಿದರು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸಭೆಯಲ್ಲಿ ಭಾಗವಹಿಸಿ ಹಾರೈಸಿದರು.

ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಪ್ರಾರ್ಥನೆಗೈದರು. ಪ್ರೆಸ್ ಕ್ಲಬ್ ಅಧ್ಯಕ್ಷ ಸೀತಾರಾಮ್ ಆಚಾರ್ಯ ಸ್ವಾಗತಿಸಿ ಪ್ರಸ್ತಾವನೆಗೈದರು. ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜೈಸನ್ ತಾಕೋಡೆ ಧನ್ಯವಾದವಿತ್ತರು. ಪ್ರೆಸ್ ಕ್ಲಬ್ ಕೋಶಾಧಿಕಾರಿ ಪ್ರಸನ್ನ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Related posts

 ಮಿಜಾರು ಶಾಲಾ ಕಟ್ಟಡಕ್ಕೆ ಆಟದ ಮೈದಾನ ಬಳಕೆಗೆ ಗ್ರಾಮಸ್ಥರ ವಿರೋಧ

Madhyama Bimba

ಮೂಡುಬಿದಿರೆ ಕಂಬಳದಲ್ಲಿ ಸಾಧಕರಿಗೆ ಪ್ರಶಸ್ತಿ, ಗೌರವ

Madhyama Bimba

ಬೆಳುವಾಯಿ ಕೋಟೆಬಾಗಿಲು ಶಿರ್ತಾಡಿ  ಜನತೆಗೆ ಹೈ ವೋಲ್ಟೇಜ್ ಎಚ್ಚರಿಕೆ!

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More