ಕಾರ್ಕಳ

ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು, ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ಪಡೆಯಲು ಸೇವಾಸಿಂಧು ವೆಬ್ ಸೈಟ್ Sevasindhu. karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು  ಜನವರಿ 9ರ ವರೆಗೆ ವಿಸ್ತರಿಸಲಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸಲಾಗುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನ ಒಟ್ಟಾರೆ ಹೂರಣ ” ಬೃಹತ್ ಶೂನ್ಯ”: ವಿ. ಸುನಿಲ್ ಕುಮಾರ್

Madhyama Bimba

ಕಾಂತಾವರ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪುಸ್ತಕ, ಸಮವಸ್ತ್ರ, ಲೇಖನ ಸಾಮಾಗ್ರಿ ವಿತರಣೆ

Madhyama Bimba

ನುಡಿದಂತೆ ನಡೆದ ಸರಕಾರ: ಸಿದ್ಧರಾಮಯ್ಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More