ಕಾರ್ಕಳ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಉಚಿತ ಕನ್ನಡಕ ವಿತರಣೆ

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಕುಕ್ಕುಂದೂರು ಇಲ್ಲಿ 28 ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಕ್ಲಬ್ ಕಾರ್ಕಳ ಇದರ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ನೇತ್ರ ತಪಾಸಣಾ ಶಿಬಿರದಲ್ಲಿ ದೃಷ್ಟಿ ದೋಷವಿರುವ ಫಲಾನುಭವಿಗಳಿಗೆ ನೀಡಿದ ಕನ್ನಡಕಗಳು ಸದುಪಯೋಗವಾಗಲಿ, ನಿಮ್ಮ ಬಾಳಿಗೆ ಬೆಳಕನ್ನು ನೀಡಲಿ ಎಂದು ಶುಭ ಹಾರೈಸಿದರು.

ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಯು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶಶಿಕಲಾ, ಕ್ಲಬ್‌ನ ಕಾರ್ಯದರ್ಶಿ ಚೇತನ್ ನಾಯಕ್, ಕ್ಷಯ ರೋಗ ಮೇಲ್ವಿಚಾರಕ ಶಿವಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರೋಟರಿ ಸಮುದಾಯ ಸೇವಾ ಚೇರ್ಮನ್ ವಸಂತ್ ಎಂ, ಕೃಷ್ಣ ಶೆಟ್ಟಿ, ಉದಯ ಕಡಂಬ, ನಕ್ರೆ ಗ್ರಾಮ ಪಂಚಾಯತ್ ಸದಸ್ಯರು, ಆರೋಗ್ಯ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.

ಆಶಾ ಕಾರ್ಯಕರ್ತೆ ಸುನೀತಾ ಪ್ರಾರ್ಥಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕುಮುದಾವತಿ ಸ್ವಾಗತಿಸಿ ನಿರೂಪಿಸಿದರು. ವೈದ್ಯಾಧಿಕಾರಿ ಡಾ.ಶ್ರೀವಿದ್ಯಾ ಕಿದಿಯೂರು ವಂದಿಸಿದರು.

Related posts

ಹೆಬ್ರಿ ತಾಲ್ಲೂಕಿನಾದ್ಯಂತ ಭಾರಿ ಗಾಳಿ ಮಳೆ : ನೂರಾರು ಮರಗಳು, ವಿದ್ಯುತ್ ಕಂಬಗಳು ಧರಗೆ : ಕೃಷಿಗೆ ಅಪಾರ ನಷ್ಟ !

Madhyama Bimba

ರಾ.ಹೆ. 169 : ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡದ ಇಲಾಖೆ- ಸಾಣೂರಿನಲ್ಲಿ ಸಾರ್ವಜನಿಕರಿಂದಲೇ ತಾತ್ಕಾಲಿಕ ತಂಗುದಾಣ ನಿರ್ಮಾಣ

Madhyama Bimba

ಪ್ರಕರಣ ವಿಳಂಬವಾದರೆ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮತ್ತೆ ಉಪವಾಸ ಸತ್ಯಾಗ್ರಹ: ದಿವ್ಯಾ ನಾಯಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More