ಕಾರ್ಕಳ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ – ಎಸ್.ಎಸ್.ಪಿ ತಂತ್ರಾಂಶ  https://ssp.postmatric.karnataka.gov.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು   ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.


ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳದಲ್ಲಿ ಫೆ. 06ರಂದು ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

Madhyama Bimba

ನಿಟ್ಟೆಯ ಯುವತಿ ಕಾಣೆ

Madhyama Bimba

ಅಜೆಕಾರು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ,

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More