ಕಾರ್ಕಳ

ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ವಿದೇಶಿ ವಿಶ್ವವಿದ್ಯಾನಿಲಯ ಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್https://sevasindhu.karnataka. gov.in/sevasindhu/DepartmentService ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31 ರ ವರೆಗೆ ವಿಸ್ತರಿಸಲಾಗಿದೆ.


ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ. 16 ಸಿ, ಮೌಲಾನಾ ಅಬುಲ್ ಕಲಾಂ ಆಜಾದ್ ಭವನ, ವಸಂತನಗರ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596, ಜಿಲ್ಲಾ ಅಲ್ಪ ಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಅಜಾದ್ ಭವನ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574596 ಅಥವಾ ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಲಯನ್ಸ್ ವಲಯಾಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಬೈಲೂರು ಆಯ್ಕೆ 

Madhyama Bimba

ಎನ್.ಡಿ.ಎ ಪ್ರವೇಶ ಪರೀಕ್ಷೆ:  ಜ್ಞಾನಸುಧಾದ ಹನ್ನೊಂದು ವಿದ್ಯಾರ್ಥಿಗಳು ತೇರ್ಗಡೆ

Madhyama Bimba

ಚಿಕ್ಕಲ್‌ಬೆಟ್ಟು ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವತಿಯಿಂದ ಶ್ರಮದಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More