ಕಾರ್ಕಳ

ಪ.ಜಾತಿ/ ಪಂಗಡದ ಜನಾಂಗದವರಿಂದ ಅಹವಾಲು ಸಲ್ಲಿಕೆಗೆ ಅವಕಾಶ

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರು ವಿವಿಧ ಇಲಾಖೆಗಳಿಗೆ ಸಂಬಂಧಪಟ್ಟಂತೆ ಅಹವಾಲುಗಳಿದ್ದಲ್ಲಿ ಆಯಾ ತಾಲೂಕಿನ ತಹಶೀಲ್ದಾರ್ ಅವರ ಕಚೇರಿಯಲ್ಲಿ ಜ. 20 ರಿಂದ 22ರ ವರೆಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲಿಖಿತ ರೂಪದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.


ಸದರಿ ಅಹವಾಲುಗಳನ್ನು ಸ್ವೀಕರಿಸಿದ ನಂತರ ಸಂಬಂಧಪಟ್ಟ ಇಲಾಖೆಗಳಿಂದ ಅಹವಾಲುಗಳಿಗೆ ಸಂಬಂಧಿಸಿದಂತೆ ಮಾಹಿತಿ / ಉತ್ತರ ಪಡೆದು ನಂತರ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಕುಂದುಕೊರತೆ ಸಭೆಯನ್ನು ನಡೆಸಲು ದಿನಾಂಕ ನಿಗಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕನ್ನಡ ಭಾಷಣ: ಕ್ರಿಯೇಟಿವ್‌ನ ಆದ್ಯ ರಾಜ್ಯ ಮಟ್ಟಕ್ಕೆ

Madhyama Bimba

ಗಣಿತ ನಗರ :-ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

Madhyama Bimba

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More