ಕಾರ್ಕಳಹೆಬ್ರಿ

ಬಾಲ್ಯ ವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ: ಪ್ರಸ್ತಾವನೆ ಆಹ್ವಾನ

ಬಾಲ್ಯವಿವಾಹ ನಿಷೇಧಕ್ಕೆ ಸಂಬಂಧಿಸಿದಂತೆ ಶೂನ್ಯ ಸಹಿಷ್ಣುತೆ ಹೊಂದಿರುವ ಬಾಲ್ಯ ವಿವಾಹ ಮುಕ್ತ ಗ್ರಾಮ ಪಂಚಾಯತ್‌ಗಳನ್ನು ಗುರುತಿಸಿ, ಉಡುಪಿ ಜಿಲ್ಲೆಯಲ್ಲಿ ಒಂದು ಗ್ರಾಮ ಪಂಚಾಯತಿಗೆ ಪ್ರಶಸ್ತಿ ರೂ. 25,000 ಗಳನ್ನು ನೀಡಲು ಆದೇಶಿಸಿದ್ದು, ಅದರಂತೆ 2024-25 ನೇ ಸಾಲಿನಲ್ಲಿ ಬಾಲ್ಯವಿವಾಹ ಶೂನ್ಯ ಸಹಿಷ್ಣುತೆ ಹೊಂದಿರುವ ಗ್ರಾಮ ಪಂಚಾಯತ್ ಗಳಿಗೆ ಪ್ರಶಸ್ತಿ ನೀಡುವ ಸಲುವಾಗಿ ನಿಗಧಿತ ನಮೂನೆಯಲ್ಲಿ ದಾಖಲಾತಿ ಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.


ಪ್ರಸ್ತಾವನೆಗಳನ್ನು ಸಲ್ಲಿಸಲು ಜನವರಿ 23 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574964 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ: ವಿದ್ಯಾರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Madhyama Bimba

ಸಚ್ಚೇರಿಪೇಟೆಯಲ್ಲಿ 22ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ

Madhyama Bimba

ಕಾರ್ಕಳ: ಮಹಿಳೆಯೋರ್ವರಿಗೆ ನಿಂದನೆ- ಜೀವ ಬೆದರಿಕೆ- ಮನೆಗೆ ಮತ್ತು ದ್ವಿಚಕ್ರ ವಾಹನಕ್ಕೆ ಹಾನಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More