ಕಾರ್ಕಳ

ಕಾರ್ಕಳ: ಸಾಣೂರು ಬಳಿ ಸ್ಕೂಟಿಗೆ ಮೋಟಾರ್ ಸೈಕಲ್ ಡಿಕ್ಕಿ

ಕಾರ್ಕಳ: ಸಾಣೂರು ಬಳಿ ಸ್ಕೂಟಿಗೆ ಮೋಟಾರ್ ಸೈಕಲ್ ಡಿಕ್ಕಿಯಾಗಿ ಸ್ಕೂಟಿ ಹಿಂಬದಿ ಸವಾರೆ ಗಾಯಗೊಂಡ ಘಟನೆ ಜ. 29ರಂದು ವರದಿಯಾಗಿದೆ.

ಬೆಳ್ತಂಗಡಿಯ ಶ್ವೇತಾ ಗಾಯಗೊಂಡವರು.


ಬೆಳ್ತಂಗಡಿಯ ಪ್ರಸನ್ನ (23) ಹಾಗೂ ಶ್ವೇತಾ ಸ್ಕೂಟಿಯಲ್ಲಿ ಅತ್ತೂರು ಜಾತ್ರೆ ಮುಗಿಸಿಕೊಂಡು ವಾಪಸ್ಸು ಮೂಡಬಿದಿರೆ ಕಡೆಗೆ ಹೋಗುತ್ತಿರುವಾಗ ಕಾರ್ಕಳ ಕಡೆಯಿಂದ ಮೋಟಾರ್ ಸೈಕಲ್ ಸವಾರ ಅತಿವೇಗದಿಂದ ಚಲಾಯಿಸಿಕೊಂಡು ಬಂದು ಸ್ಕೂಟಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ಶ್ವೇತಾ ನೆಲಕ್ಕೆ ಬಿದ್ದು ಗಾಯಗೊಂಡಿದ್ದಾರೆ.
ಚಿಕಿತ್ಸೆಗಾಗಿ ಶ್ವೇತಾಳನ್ನು ಮೂಡಬಿದಿರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಕಾರ್ಕಳ: ಮುಡಾರು ಸೊಸೈಟಿಯಲ್ಲಿ ಕಳ್ಳತನಕ್ಕೆ ಯತ್ನ

Madhyama Bimba

ಆಡಳಿತ ನ್ಯಾಯಾಧೀಕರಣ ತರಬೇತಿ: ಅರ್ಜಿ ಆಹ್ವಾನ

Madhyama Bimba

ಆರೋಗ್ಯ ಇಲಾಖೆಯ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More