ತುಳುನಾಡಿನ ಸುಪ್ರಸಿದ್ಧ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುವ ಕೋಟಿ-ಚೆನ್ನಯ 23ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳೋತ್ಸವ ಶಾಸಕ ಉಮಾನಾಥ ಎ. ಕೋಟ್ಯಾನ್ ನೇತೃತ್ವದಲ್ಲಿ ಜನವರಿ ೩೧ರಂದು ಪೂರ್ವಾಹ್ನ ಗಂಟೆ 7.00ರಿಂದ ನಡೆಯಲಿದೆ.
ಕಡಲಕೆರೆ ಸೃಷ್ಟಿ ಗಾರ್ಡನ್ ನಲ್ಲಿ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ ಹಾಗೂ ಕೋಶಾಧಿಕಾರಿ ಭಾಸ್ಕರ್ ಕೋಟ್ಯಾನ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಕಂಬಳ ಸಮಿತಿ ಪ್ರಮುಖರಾದ ರಂಜಿತ್ ಪೂಜಾರಿ ತೋಡಾರು, ಸುರೇಶ್ ಕೆ. ಪೂಜಾರಿ, ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ ಯವರು ಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಅಂದು ಪೂರ್ವಾಹ್ನ ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ. ರವರ ಅಧ್ಯಕ್ಷತೆಯಲ್ಲಿ ನಡೆಯುವ ಕಂಬಳೋತ್ಸವವನ್ನು ಅಲಂಗಾರು ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇ|ಮೂ| ಈಶ್ವರ ಭಟ್, ಅಲಂಗಾರು ಚರ್ಚ್‌ನ ಧರ್ಮಗುರು ವಂ| ಫಾ| ಮೆಲ್ವಿನ್ ನೊರೊನ್ಹಾ, ಪುತ್ತಿಗೆ ನೂರಾನಿ ಮಸ್ಜಿದ್‌ನ ಮೌಲಾನಾ ಝೀಯಾವುಲ್ಲಾ ಹಕ್, ಕುಂಟಾಡಿ ಸುಧೀರ್ ಹೆಗ್ಡೆಯವರು ಉದ್ಘಾಟಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸಭಾ ವೇದಿಕೆಯನ್ನು ಉದ್ಘಾಟಿಸಲಿದ್ದು, ಆಧ್ಯಾತ್ಮಿಕ ಗುರು, ಅಂತರಾಷ್ಟ್ರೀಯ ವಾಸ್ತು ತಜ್ಞ ಚಂದ್ರಶೇಖರ ಸ್ವಾಮೀಜಿ ದೀಪ ಪ್ರಜ್ವಲನೆಗೈಯಲಿದ್ದಾರೆ. ರಾಣಿ ಅಬ್ಬಕ್ಕ ದೇವಿಯ ಕುರಿತು ಖ್ಯಾತ ವಾಗ್ಮಿ ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ. ಜವನೆರ್ ಬೆದ್ರ ಫೌಂಡೇಶನ್ ಸಂಸ್ಥಾಪಕ ಅಮರ್‌ಕೋಟೆಯವರಿಗೆ ಗೌರವ ಸನ್ಮಾನ ನಡೆಯಲಿದೆ. ಅಂದು ಸಾಯಂಕಾಲ ೫.೦೦ ಗಂಟೆಗೆ ಫೆಬಿಯನ್ ಕೊಲಾಸೋ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಆಂಧ್ರ ಪ್ರದೇಶ ಘನತೆವೆತ್ತ ರಾಜ್ಯಪಾಲರು ಹಾಗೂ ನಿವೃತ್ತ ಸುಪ್ರೀಮ್ ಕೋರ್ಟ್ ನ್ಯಾಯಾಧೀಶರು ನ್ಯಾ.ಮೂ. ಅಬ್ದುಲ್ ನಝೀರ್ ನೆರವೇರಿಸಲಿದ್ದಾರೆ. ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ, ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ, ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಗೌರವ ಉಪಸ್ಥಿತಿ ಹೊಂದಲಿದ್ದಾರೆ. ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ವಿಶೇಷ ಗೌರವ ಅತಿಥಿಗಳಾಗಿ ಚಲನಚಿತ್ರ ನಿರ್ದೇಶಕ ಮತ್ತು ನಟ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವಿ. ಸುನಿಲ್ ಕುಮಾರ್, ರಾಜೇಶ್ ನಾಕ್, ಡಾ. ವೈ. ಭರತ್ ಶೆಟ್ಟಿ, ಡಿ. ವೇದವ್ಯಾಸ ಕಾಮತ್, ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ಭಾಗೀರತಿ ಮುರುಳ್ಯ, ಯಶ್‌ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಡಾ| ಧನಂಜಯ ಸರ್ಜಿ, ಕಿಶೋರ್ ಕುಮಾರ್ ಪುತ್ತೂರು, ಪ್ರತಾಪಸಿಂಹ ನಾಯಕ್, ಐವನ್ ಡಿಸೋಜಾ, ಎಸ್.ಎಲ್. ಭೋಜೆಗೌಡ, ಮಂಜುನಾಥ ಭಂಡಾರಿ, ಮಾಜಿ ಸಚಿವ ರಾದ ಕೆ. ಅಭಯಚಂದ್ರ ಜೈನ್, ಕೃಷ್ಣ ಜೆ. ಪಾಲೇಮಾರ್ ಭಾಗವಹಿಸಲಿದ್ದಾರೆ.
ಅನಿವಾಸಿ ಉದ್ಯಮಿ ರೊನಾಲ್ಡ್ ಕೊಲಾಸೊ, ಮಾಜಿ ಶಾಸಕರುಗಳು, ವಿಧಾನಪರಿಷತ್ ಸದಸ್ಯರುಗಳು, ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಸೇರಿದಂತೆ ಹಲವಾರು ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಫೆ. ೦೧ರಂದು ಪೂರ್ವಾಹ್ನ ಮೂಡುಬಿದಿರೆ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ಶ್ರೀಧರ ಎಸ್. ಮುಂಡಾಲಮನಿ, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ., ಹಾಗೂ ಇಲಾಖಾಧಿಕಾರಿಗಳ ಸಮಕ್ಷಮದಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಲಿದೆ.
ಪ್ರಸಕ್ತ ಸನ್ನಿವೇಶಕ್ಕೆ ಅನುಕೂಲವಾಗುವಂತೆ ಕಂಬಳ ಕರೆಯನ್ನು 35ಲಕ್ಷ ರುಪಾಯಿ ವೆಚ್ಚದಲ್ಲಿ 18 ಅಡಿ ಅಗಲ ಹಾಗೂ 145ಮೀಟರ್ ಉದ್ದಕ್ಕೆ ಸೀಮಿತಗೊಳಿಸಲಾಗಿದೆ. ಕರೆಯನ್ನು ಎತ್ತರಗೊಳಿಸಿ ಕಡಲಕೆರೆಯ ನೀರು ಕಂಬಳ ಕರೆಗೆ ಬಾರದಂತೆ ತಡೆಯಲಾಗಿದೆ. ಒಟ್ಟಾರೆಯಾಗಿ ಕಂಬಳ ತುಳು ಭಾಷೆಗೆ ಪ್ರಚಾರ ನೀಡುವ ಉತ್ತಮ ಸಾಧನವಾಗಿಯೂ ಮೂಡಿಬಂದಿದೆ ಎಂದು ಅವರು ಹೇಳಿದರು
