ಮೂಡುಬಿದಿರೆ

ಮೂಡುಬಿದಿರೆ ಕೋಟಿ ಚೆನ್ನಯ ಕಂಬಳ ಚಾಲನೆ

ತುಳುನಾಡಿನ ಸುಪ್ರಸಿದ್ಧ ಮೂಡುಬಿದಿರೆ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಕೋಟಿ-ಚೆನ್ನಯ 23ನೇ ವರ್ಷದ ಹೊನಲು ಬೆಳಕಿನ ಬಯಲು ಕಂಬಳೋತ್ಸವ ಶಾಸಕ ಉಮಾನಾಥ ಎ. ಕೋಟ್ಯಾನ್ ನೇತೃತ್ವದಲ್ಲಿ ಜನವರಿ 31ರಂದು ಚಾಲನೆ ಪಡೆದುಕೊಂಡಿತು.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಉದ್ಘಾಟಿಸಿ ಪಾರಂಪರಿಕ ಕಂಬಳ ಉಳಿಸಿ ಬೆಳೆಸಬೇಕು. ಹಬ್ಬವಾಗಿ ಬೆಳೆದು ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವುದು ಸಂತಸದಾಯಕ ಎಂದರು. ನಂತರ ಜಿಲ್ಲಾಧಿಕಾರಿಯವರನ್ನು ಶಾಲು ಹಾರ ಪೇಟ ಫಲವಸ್ತು ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಮೂಡುಬಿದಿರೆ ಚೌಟರ ಅರಮನೆ ಕುಲದೀಪ ಎಂ. ರವರ ಅಧ್ಯಕ್ಷತೆಯಲ್ಲಿ ನಡೆದ ಕಂಬಳೋತ್ಸವವನ್ನು ಅಲಂಗಾರು ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇ|ಮೂ| ಈಶ್ವರ ಭಟ್, ಅಲಂಗಾರು ಚರ್ಚ್‌ನ ಧರ್ಮಗುರು ವಂ| ಫಾ| ಮೆಲ್ವಿನ್ ನೊರೊನ್ಹಾ, ಪುತ್ತಿಗೆ ನೂರಾನಿ ಮಸ್ಜಿದ್‌ನ ಮೌಲಾನಾ ಝೀಯಾವುಲ್ಲಾ ಹಕ್, ಕುಂಟಾಡಿ ಸುಧೀರ್ ಹೆಗ್ಡೆಯವರು ಉದ್ಘಾಟಿಸಿದರು.

ತಹಶೀಲ್ದಾರ್ ಶ್ರೀಧರ ಮುಂಡಲಮನಿ, ಮುಖ್ಯಾಧಿಕಾರಿ ಇಂದು ಎಂ. ನ್ಯಾಯವಾದಿ ಶ್ವೇತಾ, ಲಯನ್ಸ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ,
ಉದ್ಯಮಿ ತಿಮ್ಮಯ ಶೆಟ್ಟಿ, ಧನಕೀರ್ತಿ ಬಲಿಪ,  ಕಂಬಳ ಸಮಿತಿ ಕೋಶಾಧಿಕಾರಿ ಭಾಸ್ಕರ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗುಣಪಾಲ ಕಡಂಬ, ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸದಸ್ಯರುಗಳು, ಉದ್ಯಮಿ ಶ್ರೀಪತಿ ಭಟ್, ಮೇಘನಾಥ ಶೆಟ್ಟಿ ಭಾಗವಹಿಸಿದ್ದರು. ರಾಣಿ ಅಬ್ಬಕ್ಕ ದೇವಿಯ ಕುರಿತು ಖ್ಯಾತ ವಾಗ್ಮಿ ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಿದರು. ಜವನೆರ್ ಬೆದ್ರ ಫೌಂಡೇಶನ್ ಸಂಸ್ಥಾಪಕ ಅಮರ್‌ಕೋಟೆಯವರಿಗೆ ಗೌರವ ಸನ್ಮಾನ ನಡೆಯಿತು.

ಕಂಬಳ ಸಮಿತಿ ಪ್ರಮುಖರಾದ ರಂಜಿತ್ ಪೂಜಾರಿ ತೋಡಾರು, ಸುರೇಶ್ ಕೆ. ಪೂಜಾರಿ, ಬಿಜೆಪಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ ಕಂಬಳ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕುಸ್ತಿ ಪಂದ್ಯಾಟ 2024: ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Madhyama Bimba

ಮೂಡುಬಿದಿರೆಯಲ್ಲಿ ಗಾಂಧಿ ಸ್ಮೃತಿ ಮತ್ತು ಪಾನ ಮುಕ್ತರ ಸಮಾವೇಶ- ದುಶ್ಚಟದಿಂದ ಮುಕ್ತರಾಗಿ : ಮಾಜಿ ಸಚಿವ ಅಭಯಚಂದ್ರ ಕರೆ

Madhyama Bimba

 ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರುಕ್ಕಯ್ಯ ಪೂಜಾರಿ, ಉದ್ಯಮಿ ಸುರೇಶ್ ಪೂಜಾರಿಯವರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More