ಕಾರ್ಕಳ

ಮಾಳ: ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರಚಿಕಿತ್ಸೆ ಶಿಬಿರ

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ನ್ಯಾಷನಲ್ ಮೆಡಿಕೋಸ್ ಆರ್ಗನೈಜೇಷನ್, ಒನ್ ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್ ಬೆಂಗಳೂರು, ಗ್ರಾಮ ಪಂಚಾಯಿತಿ ಮಾಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಮತ್ತು ಪೊರೆ ಶಸ್ತ್ರಚಿಕಿತ್ಸೆ ಶಿಬಿರ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಳ ಇಲ್ಲಿ ಜ. 30ರಂದು ನಡೆಯಿತು.


ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದಿಶಾ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.
ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉಡುಪಿ ಇಲ್ಲಿನ ವೈದ್ಯಾಧಿಕಾರಿ ಡಾ.ಕ್ರೀನಾ, ಪಿಆರ್‌ಓ ಹರ್ಷ ಪೂಜಾರಿ ಮತ್ತು ಸಿಬ್ಬಂದಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಂದಿನಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ವಿನುತಾ ಧನ್ಯವಾದ ತಿಳಿಸಿದ್ದರು.


ಕಾರ್ಯಕ್ರಮದಲ್ಲಿ 82 ಫಲಾನುಭವಿಗಳು ಪ್ರಯೋಜನ ಪಡೆದುಕೊಂಡರು.

Related posts

ಕಾರ್ಕಳ: ವಿಷ ಸೇವನೆ- ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Madhyama Bimba

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಗಣಹೋಮ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba

ಕಾರ್ಕಳ: ಸ್ಕೂಟರ್ ತಡೆಗೋಡೆಗೆ ಡಿಕ್ಕಿ- ಸವಾರ ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More