Blog

ಬಜೆಟ್ ಕುರಿತು ಸುನಿಲ್ ಕುಮಾರ್ ಪ್ರತಿಕ್ರಿಯೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ. ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು ಜಲ ಸಂಪರ್ಕ, ಹೈ–ಸ್ಪೀಡ್ ರೈಲು, ಎಂಎಸ್‌ಎಂಇಗಳು ಹಾಗೂ ಸೇವಾ ಕ್ಷೇತ್ರಗಳಿಗೆ ಒತ್ತು ನೀಡುವ ಮೂಲಕ, ಭವಿಷ್ಯಕ್ಕೆ ಸಿದ್ಧವಾದ ಕರ್ನಾಟಕದ ನಿರ್ಮಾಣಕ್ಕೆ ಈ ಬಜೆಟ್ ದೃಢವಾದ ನೆಲೆಯನ್ನು ಹಾಕಿದೆ.
ಅರ್ಥ ವ್ಯವಸ್ಥೆಯ ಸೂಕ್ಷ್ಮ ಸಂಗತಿಗಳಿಗೂ ಆದ್ಯತೆ ನೀಡುವ ಮೂಲಕ ಪ್ರವಾಸೋದ್ಯಮ, ಕೃಷಿ, ತೋಟಗಾರಿಕೆ, ಎಂಎಸ್ ಎಂಇ, ಮೂಲಸೌಕರ್ಯ, ಆರ್ಥಿಕ ಕಾರಿಡಾರ್ ಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗಿದೆ. ಪರಿಸರ ಸಮತೋಲನಕ್ಕಾಗಿ ವಿಶೇಷ ಆದ್ಯತೆ ನೀಡಿರುವುದು ಈ ಬಜೆಟ್ ಇನ್ನೊಂದು ವಿಶೇಷ. ಹವಾಮಾನ ವೈತರೀತ್ಯದಂಥ ಸಂಗತಿಗಳನ್ನೂ ಕೇಂದ್ರ ಸರ್ಕಾರ ಸೂಕ್ಷ್ಮ ವಾಗಿ ಗಮನಿಸುತ್ತಿದೆ ಎಂಬುದಕ್ಕೆ ಇದೊಂದು ಉದಾಹರಣೆ. ಭಾರತವನ್ನು ಐದು ಟ್ರಿಲಿಯನ್ ಅರ್ಥವ್ಯವಸ್ಥೆಯನ್ನಾಗಿ ರೂಪಿಸುವಲ್ಲಿ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ.

ವಿ ಸುನಿಲ್ ಕುಮಾರ್,
ಶಾಸಕರು ಕಾರ್ಕಳ, ಮಾಜಿ ಸಚಿವರು ಕರ್ನಾಟಕ ಸರ್ಕಾರ

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬೂಬ ಪರವರವರಿಗೆ ಯುವ ಸಂಗಮದಿಂದ ಗೌರವ ಸನ್ಮಾನ

Madhyama Bimba

ಕಾಂಗ್ರೆಸ್ ನ ರಾಜಕೀಯ ಸೇಡಿಗೆ  ಪರಶುರಾಮ ಥೀಂ ಪಾರ್ಕ್ ಬಲಿ – ಬಿಜೆಪಿ ಆರೋಪ

Madhyama Bimba

ಪ್ರಫುಲ್ಲ  ಆಚಾರ್ಯ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More