ಕಾರ್ಕಳ

ಕಾರ್ಕಳದಲ್ಲಿ ಫೆ. 06ರಂದು ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆ. 6 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಕಾರ್ಕಳ ತಾಲೂಕು ಸರಕಾರಿ ಪ್ರವಾಸಿ ಮಂದಿರದ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.


ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661,, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.


ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ ಮಹಾಮಸ್ತಕಾಭಿಷೇಕ ಹಿನ್ನಲೆಯಲ್ಲಿ ಶ್ರೀ ಕೂಷ್ಮಾಂಡಿನಿ ಜೈನ ಬಸದಿ ಸಭಾಭವನ ನಿರ್ಮಾಣಕ್ಕೆ 50.00 ಲಕ್ಷ ಅನುದಾನ ಬಿಡುಗಡೆ

Madhyama Bimba

ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ – ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ

Madhyama Bimba

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More