ಕಾರ್ಕಳ

ಬಾಲಗೌರವ ಪ್ರಶಸ್ತಿ: ಅರ್ಜಿ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ್ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 14 ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ ಪ್ರಶಸ್ತಿ ಗೆ ಅರ್ಜಿ ಆಹ್ವಾನಿಸಲಾಗಿದೆ.


ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಓಂದನೇ ಮಹಡಿ, 204, ಬಿ ಬ್ಲಾಕ್ ರಜತಾದ್ರಿ, ಉಡುಪಿ ಜಿಲ್ಲೆ ಅಥವಾ ದೂ.ಸಂಖ್ಯೆ : 0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ನಕ್ರೆ ಪರಪು ಮನೆಯಲ್ಲಿ ಕಳ್ಳತನ

Madhyama Bimba

ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ

Madhyama Bimba

ರಾಜ್ಯ ಮಟ್ಟದ ಕ್ರೀಡಾಕೂಟ: ನಿಟ್ಟೆಯ ವಿದ್ಯಾರ್ಥಿನಿ ರಶ್ಮಿತಾಗೆ ಬೆಳ್ಳಿಯ ಪದಕ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More