ಕಾರ್ಕಳಹೆಬ್ರಿ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಪುಸ್ತಕಗಳನ್ನು ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯದ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.


ಪ್ರಶಸ್ತಿಗಾಗಿ ಪರಿಗಣಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಫೆಬ್ರವರಿ 20 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ- 580004 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ.


ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಮುದ್ರಾಡಿ : ಹಣಕಾಸು ಸಾಕ್ಷರತಾ ಸಪ್ತಾಹ  ಅಂಗವಾಗಿ ಗ್ರಾಹಕ ಸೇವಾ ಕೇಂದ್ರ ಉದ್ಘಾಟನೆ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

Madhyama Bimba

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಮೊದಲ 10ರ ಸ್ಥಾನದಲ್ಲಿ ಜ್ಞಾನಸುಧಾದ 49 ವಿದ್ಯಾರ್ಥಿಗಳು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More