ಕಾರ್ಕಳ

ಕಾರ್ಕಳ ಎಂಪಿಎಂ ಕಾಲೇಜಿನ ವಾರ್ಷಿಕ ವಿಶೇಷ ಶಿಬಿರ

ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 3ನೇ ದಿನದ ವಾರ್ಷಿಕ ವಿಶೇಷ ಶಿಬಿರ ವಿಜೇತ ವಿಶೇಷ ಶಾಲೆಯಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಪುರಸಭೆ ಅಧ್ಯಕ್ಷರಾದ ಸುಬಿತ್ ಎನ್ ಆರ್ ವಹಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಶಿಕ್ಷಣ ಸಂಪನ್ಮೂಲ ಕೇಂದ್ರ ಕಾರ್ಕಳ ಶ್ರೀಮತಿ ಶೋಭಾ ಭಾಸ್ಕರ್ ರವರು “ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯದ ಅಗತ್ಯತೆ” ವಿಷಯದ ಕುರಿತಂತೆ ಉಪನ್ಯಾಸ ನೀಡಿದರು.

ಮುಖ್ಯ ಅತಿಥಿಗಳಾಗಿ ಜಿ.ಎಸ್.ಬಿ ಸಮುದಾಯದ ಸದಸ್ಯರಾದ ರೇಷ್ಮ ಶೆಣೈ, ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಶ್ರೀಮತಿ ಸೌಮ್ಯ ಹೆಚ್ ಕೆ ಮತ್ತು ಶ್ರೀಮತಿ ಜಯಲಕ್ಷ್ಮೀ, ವಿಜೇತ ವಿಶೇಷ ಶಾಲಾ ಸ್ಥಾಪಕರಾದ ಡಾ. ಕಾಂತಿ ಹರೀಶ್, ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಪ್ರೊ.ಚಂದ್ರಕಾಂತ್ ಶೆಣೈ, ಪ್ರೊ.ರೇಣುಕಾ ಎಚ್. ಜಿ ಉಪಸ್ಥಿತರಿದ್ದರು.

ಎನ್ ಎಸ್ ಎಸ್ ವಿದ್ಯಾರ್ಥಿಗಳಾದ ಹುಲ್ಗೆಶ್ ಕಾರ್ಯಕ್ರಮ ನಿರೂಪಿಸಿ, ಚಂದನ ಸ್ವಾಗತಿಸಿ, ಆರತಿ ವಂದಿಸಿದರು.

Related posts

ನೂತನ ಅಧ್ಯಕ್ಷರ ಆಯ್ಕೆಯಿಂದ ಪಕ್ಷಕ್ಕೆ ಬಲ: ಉದಯ ಶೆಟ್ಟಿ ಮುನಿಯಾಲು

Madhyama Bimba

ನುಡಿದಂತೆ ನಡೆದ ಸರಕಾರ: ಸಿದ್ಧರಾಮಯ್ಯ

Madhyama Bimba

ಪಡುಕುಡೂರು : ವಾತ್ಸಾಲ್ಯ ಕಿಟ್ ವಿತರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More