ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಆಶ್ಲೇಷಾ ಬಲಿ : ಮಹಾ ಅನ್ನ ಸಂತರ್ಪಣೆ

ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಶುಕ್ರವಾರ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಪೂರ್ವಭಾವಿಯಾಗಿ ಆಶ್ಲೇಷಾ ಬಲಿದಾನ, ಪಂಚವಿಶಂತಿ ದ್ರವ್ಯಮೀಳಿತಕಲಶ, ಪ್ರಧಾನ ಯಾಗ, ಸರ್ಪತ್ರಯ ಮಂತ್ರ ಯಾಗ, ಪವಮಾನಸೂಕ್ತ ಯಾಗ, ತಿಲ ಯಾಗ, ಬ್ರಹ್ಮಚಾರಿ ಆರಾಧನಾ, ಪ್ರಸನ್ನ ಪೂಜೆ, ಪಲ್ಲಪೂಜೆ,ಅನ್ನರಾಧನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಶ್ರೀ ಭವಾನಿ ಭೋಜನಾಲಯದಲ್ಲಿ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀದುರ್ಗಾನಮಸ್ಕಾರ ಪೂಜೆ ನಡೆಯಿತು.


ವಿದ್ವಾನ್ ಕೊರಂಗ್ರಪಾಡಿ ಕೆ.ಪಿ. ಕುಮಾರಗುರು ತಂತ್ರಿಗಳ ನೇತ್ರತ್ವದಲ್ಲಿ ವಾಸುದೇವ ಭಟ್ ಅವರ ಸಹಯೋಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮುನಿಯಾಲು ಸಂಜೀವಿನಿ ಗೋಧಾಮದ ಸಂಸ್ಥಾಪಕ ಡಾ. ಜಿ ರಾಮಕೃಷ್ಣ ಆಚಾರ್, ಸವಿತಾ ಆರ್ ಆಚಾರ್, ಅನುಷಾ ಆಚಾರ್, ಪ್ರಜ್ವಲ್ ಆಚಾರ್, ಪೂಜಾ ಆಚಾರ್, ತೇಜಸ್ ಆಚಾರ್, ರಕ್ಷತ್ ಆಚಾರ್, ಹಾಗೂ ಕುಟುಂಬಸ್ಥರು, ಶ್ರೀಮನ್ನಾಗಮಂಡಲ ಸೇವಾ ಸಮಿತಿಯ ಅಧ್ಯಕ್ಷ ದೇವಿಪ್ರಸಾದ ಶೆಟ್ಟಿ ಸಾಣೂರುಗುತ್ತು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ ಶೆಟ್ಟಿ ಕಾರ್ಕಳ, ದಾಮೋಧರ ಶರ್ಮ ಬಾರ್ಕೂರು, ಸಮಿತಿಯ ಸದಸ್ಯರು, ಪದಾಧಿಕಾರಿಗಳು, ಗಣ್ಯರು, ಪ್ರಮುಖರು, ಸಂಘಸಂಸ್ಥೆಗಳ ಪ್ರಮುಖರು ಭಾಗವಹಿಸಿದ್ದರು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೊಗೀಶ್ ಶೆಟ್ಟಿ ಕಾಪು, ಜಗದೀಶ ಅಧಿಕಾರಿ ಮೂಡಬಿದರೆ ಸೇರಿದಂತೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರ ಕಡೆಗಳ ಗಣ್ಯರು, ಭಕ್ತ ಸಮೂಹ ಶ್ರೀಮನ್ನಾಗಮಂಡಲದಲ್ಲಿ ಭಾಗಿಯಾದರು. ಸಹಸ್ರಾರು ಮಂದಿ ಮಹಾಅನ್ನದಾನ ಸ್ವೀಕರಿಸಿದರು.

Related posts

ಕಾಂಗ್ರೆಸ್ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಪುಣ್ಯಸ್ಮರಣೆ

Madhyama Bimba

ಹೆಬ್ರಿ ತಹಶೀಲ್ಧಾರ್ ಎಸ್.ಎ.ಪ್ರಸಾದ್ ಅವರಿಗೆ ” ಕಾಯಕರತ್ನ” ಪ್ರಶಸ್ತಿ

Madhyama Bimba

ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಡಿ. 22ರಿಂದ 27ರವರೆಗೆ ಲೇಸರ್ ಶಸ್ತ್ರಚಿಕಿತ್ಸಾ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More