ಮೂಡುಬಿದಿರೆ

ಮೂಡುಬಿದಿರೆ ಸಾಹಿತ್ಯ ಸಮ್ಮೇಳನ ಸಮಾರೋಪ

ಮೂಡುಬಿದಿರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಇಂದು ಪಾಲಡ್ಕ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಾಲು ಫಲವಸ್ತು ಸನ್ಮಾನಪತ್ರದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.

ಸುದರ್ಶನ ಶೆಟ್ಟಿ ಕಡಂದಲೆ(ಕನ್ನಡಸೇವೆ), ಪ್ರಸನ್ನ ಹೆಗ್ಡೆ (ಪತ್ರಿಕೋದ್ಯಮ), ದಾಮೋದರ ಸಫಲಿಗ (ಯಕ್ಷಗಾನ), ವೆಂಕಟೇಶ ಬಂಗೇರ, (ಕಲೆ), ಡಾ ಕಿರಣ್ ಭಟ್ ಕಡಂದಲೆ (ವೈದ್ಯಕೀಯ), ಎಡ್ವರ್ಡ್ ರೆಬೆಲ್ಲೊ ತಾಕೋಡೆ (ಕೃಷಿ)ಯವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಎಸ್. ಎಸ್. ಎಲ್. ಸಿ. ಯಲ್ಲಿ ಮೂಡುಬಿದಿರೆ ತಾಲೂಕಿಗೆ ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಮ್ಮೇಳನದ ಸರ್ವಾಧ್ಯಕ್ಷರಾದ ಅಬ್ದುಲ್ ಹಮೀದ್ ಪಕ್ಕಲಡ್ಕ ರನ್ನು ಪತ್ನಿ ಜುಬೇದಾ ಗುರುಪುರ ಹಾಗೂ ಪುತ್ರ ಸಹಿತವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಮ್ಮೇಳನದ ಯಶಸ್ಸಿಗೆ ಸಹಕರಿಸಿದ ಕೆ. ಪಿ ಸುಚರಿತ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಮಾಜಿ ಸಚಿವ ಕೆ. ಅಭಯಚಂದ್ರ, ದಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ, ಸಮ್ಮೇಳನಾಧ್ಯಕ್ಷರಾದ ಅಬ್ದುಲ್ ಹಮೀದ್ ಪಕ್ಕಲಡ್ಕ, ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ ಪಿ ಸುಚರಿತ ಶೆಟ್ಟಿ, ಉದ್ಯಮಿ ಶ್ರೀಪತಿಭಟ್, ಡಾ ಅಮರಶ್ರೀ ಅಮರನಾಥ ಶೆಟ್ಟಿ, ಪ್ರಗತಿ ಪರ ಕೃಷಿಕ ರಾಜವರ್ಮ ಬೈಲಂಗಡಿ, ವೈಬ್ರಂಟ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ್ ನಾಯಕ್, ಉದ್ಯಮಿ ಜಗಜ್ಜೀವನ್ ಶೆಟ್ಟಿ, ನಿವೃತ ದೈಹಿಕ ಶಿಕ್ಷಣ ಶಿಕ್ಷಕ ಸದಾಶಿವ, ಕಸಾಪ ಮೂಡುಬಿದಿರೆ ತಾಲೂಕು ಘಟಕ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ. ವೇದಿಕೆಯಲ್ಲಿದ್ದರು.

ಕಸಾಪ ಕೋಶಾಧಿಕಾರಿ ಅಂಡಾರು ಗುಣಪಾಲ ಹೆಗ್ಡೆ ಸ್ವಾಗತಿಸಿ, ಕಾರ್ಯದರ್ಶಿ ಸದಾನಂದ ನಾರಾವಿ ಧನ್ಯವಾದವಿತ್ತರು. ಹೋಬಳಿ ಘಟಕದ ಅಧ್ಯಕ್ಷ ರಾಮಕೃಷ್ಣ ಶಿರೂರು ನಿರೂಪಿಸಿದರು.

Related posts

ಜೆಸಿಐ ಮೂಡಬಿದ್ರಿ ತ್ರಿಭುವನ್ ವಲಯದಲ್ಲಿ ಪ್ರಥಮ

Madhyama Bimba

ಹಿಂದುತ್ವ ಮತ್ತು ಅಭಿವೃದ್ಧಿಗೆ ಬದ್ಧತೆ- ಕಾರ್ಯಕರ್ತರ ಧ್ವನಿಯಾಗುವೆ: ಕಿಶೋರ್ ಕುಮಾರ್-ಮೂಡುಬಿದಿರೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ

Madhyama Bimba

ಮೂಡುಬಿದಿರೆ, ಗೌರಿಕೆರೆ ಬಳಿಯ ಶ್ರೀ ರಾಮಪುರದ ಸಪರಿವಾರ ಶ್ರೀ ರಾಮ ದೇವರ ಬಿಂಬ ಪುನರ್ ಪ್ರತಿಷ್ಠೆ ಹಾಗೂ ಅಷ್ಠಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More