Blog

ಅಂಬೇಡ್ಕರ್ ಭವನ ಉದ್ಘಾಟನೆ ಯ ಸರಕಾರಿ ಬ್ಯಾನರ್ ನಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಸುನಿಲ್ ಕುಮಾರ್ ರ ಕಡೆಗಣನೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸಚಿವರಾದ ವಿ ಸುನೀಲ್ ಕುಮಾರ್ ಅವರ ಒತ್ತಾಸೆಯಿಂದ ಕಾರ್ಕಳದಲ್ಲಿ 6 ಕೋಟಿ‌ ರೂ. ವೆಚ್ಚದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನ ಸ್ಥಾಪನೆಗೆ ಶಂಕು ಸ್ಥಾಪನೆಯಲ್ಲಿ  ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಶಾಸಕ ಸುನಿಲ್ ಕುಮಾರ್ ರ ಭಾವಚಿತ್ರವನ್ನು ಅವಗಣನೆ ಮಾಡಿದೆ ಎಂದು ಕಾರ್ಕಳ ಬಿಜೆಪಿ ಆಕ್ರೋಶ ಹೊರ ಹಾಕಿದೆ.


ಈ ಕಾಮಗಾರಿ ಆಗಲು ಅನುದಾನವನ್ನು ಶಾಸಕ ಸುನಿಲ್ ಕುಮಾರ್ ರವರು ಮಂಜೂರು ಮಾಡಿದ್ದರು. ಆದರೆ ಈ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗುತ್ತಿದೆ.

ಸ್ಥಳೀಯ ಶಾಸಕರು ಹಾಗೂ ಸಂಸದರ ಭಾವಚಿತ್ರ ಹಾಕದೇ ಸಿಎಂ,ಡಿಸಿಎಂ ಹಾಗೂ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಮಾತ್ರ ಹಾಕಲಾಗಿದೆ. ಇದನ್ನು ಖಂಡಿಸಿ ನಾಳೆ ಬಿಜೆಪಿವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ .

Related posts

ಸತ್ಯ ನಾರಾಯಣ ಹೆಬ್ಬಾರ್ ನಿಧನ

Madhyama Bimba

ರಾಜ್ಯ ಮಟ್ಟದ ಕ್ರೀಡಾಕೂಟ

Madhyama Bimba

ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ  ಆರು ಮಂದಿಯನ್ನು ನೇಮಿಸಿದ ಸಚಿವರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More