ಕಾರ್ಕಳ

ನಾಳೆ (ಫೆ. 26ರಂದು) ಮಾನಸ ಕಂಫರ್ಟ್ಸ್ ಉದ್ಘಾಟನೆ

ಕಾರ್ಕಳ ಜೋಡುರಸ್ತೆಯಲ್ಲಿ ಕಾರ್ಲ ಸಿಟಿಸೆಂಟರ್ ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಮಾನಸ ಕಂಫರ್ಟ್ಸ್ (ನಾಳೆ) ಫೆ.26 ಗುರುವಾರದಂದು ಬೆಳಿಗ್ಗೆ 10.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ.


ಮಾಜಿ ಮುಖ್ಯಮಂತಿಗಳು ಹಾಗೂ ಮಾಜಿ ಕೇಂದ್ರ ಸಚಿವರಾದ ಎಂ. ವೀರಪ್ಪ ಮೊಯಿಲಿ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಕುಕ್ಕುಂದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಕೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ, ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಅಜೆಕಾರು ಶ್ರೀ ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಕಾರ್ಕಳ ಹಾಗೂ ಜ್ಞಾನಸುಧಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ| ಸುಧಾಕರ ಶೆಟ್ಟಿ, ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ, ಮೂಡುಬಿದಿರೆ ಇದರ ಸಹಸಂಸ್ಥಾಪಕರಾದ ಡಾ| ಗಣನಾಥ ಶೆಟ್ಟಿ, ನ್ಯಾಯವಾದಿಗಳಾದ ಶೇಖರ ಮಡಿವಾಳ, ಮಣಿರಾಜ್ ಶೆಟ್ಟಿ, ಕಾರ್ಕಳ ಪುರಸಭಾ ಸದಸ್ಯರಾದ ಅಶ್ಫಾಕ್ ಅಹಮ್ಮದ್, ನಿಟ್ಟೆ ಸಂತೋಷ್ ಕ್ಯಾಶ್ಯೂಸ್‌ನ ಸಂತೋಷ್ ಡಿಸಿಲ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Related posts

ಮಕ್ಕಿ ಶಾಲೆಯಲ್ಲಿ ಉಚಿತ ಲೇಖನ ಸಾಮಗ್ರಿ, ಕೊಡೆ ವಿತರಣೆ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ “ವಿಶ್ವ ಮಹಿಳಾ ದಿನ” ಆಚರಣೆ

Madhyama Bimba

ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸರಿಪಡಿಸುವಂತೆ ಒತ್ತಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More