ಕಾರ್ಕಳಹೆಬ್ರಿ

ಕರ್ನಾಟಕ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ದೊರಕುವಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಸರ್ಕಾರದ ಹಲವು ಸೇವೆಗಳು ನಗರ ಭಾಗದ ಸಾರ್ವಜನಿಕರ ಮನೆ ಬಾಗಿಲಿಗೆ ತಲುಪುತ್ತಿವೆ.

ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಅನುಷ್ಠಾನಗೊಳಿಸುತ್ತಿದ್ದು, ಜಿಲ್ಲೆಯ ಕಾರ್ಕಳ ಹಾಗೂ ಕಾಪು ಪುರಸಭೆ ಮತ್ತು ಉಡುಪಿ ನಗರಸಭೆಯಲ್ಲಿ ಖಾಲಿ ಇರುವ ಕರ್ನಾಟಕ ಒನ್ ಕೇಂದ್ರಗಳನ್ನು ತೆರೆಯಲು ಆಸಕ್ತ ಅಭ್ಯರ್ಥಿಗಳಿಂದ ವೆಬ್‌ಸೈಟ್ https://www.karnatakaone.gov.in/Public/Franchisee Terms ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 2 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ – ಹಸಿರು ಹೊರೆಕಾಣಿಕೆ ಸಮರ್ಪಣೆ

Madhyama Bimba

ಸುಂದರ ಕೋಟ್ಯಾನ್ ಪಂಜಿಕುಡೇಲು ನಿಧನ

Madhyama Bimba

ಸೂರಿಮಣ್ಣು ಭಜನಾ ಸುವರ್ಣ ಸಂಭ್ರಮ ಮತ್ತು ಋಕ್ ಸಂಹಿತಾ ಮಹಾಯಾಗದ ಆಮಂತ್ರಣ ಪತ್ರ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More