ಕಾರ್ಕಳ

ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಸಾಲಿನಲ್ಲಿ ಡಾ. ಬಾಬು ಜಗ ಜೀವನ ರಾಂ ರವರ 119 ನೇ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲು, ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಮಾರ್ಚ್ 10 ರ ಒಳಗಾಗಿ ಸದರಿ ಕಛೇರಿಗಳಿಗೆ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಸಾರ್ವಜನಿಕ ಶನಿಪೂಜಾ ಸಮಿತಿ ಕರಿಯಕಲ್ಲು ಮತ್ತು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಸುನಿಲ್ ಕೆ.ಆರ್ ಹುಟ್ಟು ಹಬ್ಬದ ಪ್ರಯುಕ್ತ ಅಶಕ್ತ ಕುಟುಂಬಕ್ಕೆ ಸೂರು- ಭೂಮಿ ಪೂಜೆ

Madhyama Bimba

ವಸತಿ ಶಾಲೆ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba

ದಕ್ಷಿಣ ಭಾರತದ ಸಪ್ತ ಪುಣ್ಯ ಕ್ಷೇತ್ರಗಳಿಗೆ ಕಾಲ್ನಡಿಗೆಯಲ್ಲಿ ಭೇಟಿ- 472 ಕಿ. ಮೀ. ದೂರದ ಪ್ರಯಾಣದ ಧಾರ್ಮಿಕ ಕ್ಷೇತ್ರಗಳನ್ನು ಪಾದಯಾತ್ರೆ ಮೂಲಕ ಸಂದರ್ಶಿಸಿದ ಹೆಬ್ರಿ ತಾಲೂಕು ವಿಪ್ರ ಬಾಂಧವರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More