ಕಾರ್ಕಳ

ನೀರೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು ದಂಪತಿಗೆ ಅದ್ದೂರಿ ನಾಗರಿಕ ಸನ್ಮಾನ

ನೀರೆ : ಇಲ್ಲಿನ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಸಚ್ಚಿದಾನಂದ ಪ್ರಭು ಹಾಗೂ ಅವರ ಧರ್ಮಪತ್ನಿ ಶ್ರೀಮತಿ ಆಶಾ ನಾಯಕ್ ದಂಪತಿಗಳನ್ನು ಇವರ ಅಧ್ಯಕ್ಷೀಯ ಅವಧಿಯಲ್ಲಿ ಸಂಜೀವಿನಿ ಸಂಘಕ್ಕೆ ನೀಡಿದ ಸಹಕಾರಕ್ಕಾಗಿ ಸಂಜೀವಿನಿ ಒಕ್ಕೂಟದ ಎಲ್ಲಾ ಸದಸ್ಯರು ಹಾಗೂ ಪಂಚಾಯತ್ ಸಿಬ್ಬಂದಿಗಳ ಭಾಗವಿಸುವಿಕೆಯೊಂದಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ವಿಕ್ರಂ ಹೆಗ್ಡೆ ಹಾಗೂ ಮಾಲಿನಿ ಜೆ. ಶೆಟ್ಟಿ ಉಪಸ್ಥಿತರಿದ್ದು, ದಂಪತಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಪ್ರೀತಾ, ಮರ್ಣೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಒ.) ಅಂಕಿತಾ ನಾಯಕ್ ಹಾಗೂ ನೀರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗರಾಜ್ ಉಪಸ್ಥಿತರಿದ್ದರು.

ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಪ್ರೀತಾ ಸ್ವಾಗತಿಸಿದರು. ರಮೇಶ್ ಕಲ್ಲೊಟ್ಟೆ ಕಾರ್ಯಕ್ರಮ ನಿರೂಪಿಸಿದರು. ವಾಣಿ ಶೆಟ್ಟಿ ವಂದಿಸಿದರು.

ಸ್ಥಳೀಯ ಜನಪ್ರತಿನಿಧಿಗಳು ಮತ್ತು ಪಂಚಾಯತ್ ಸಿಬ್ಬಂದಿಗಳು ಈ ಸಂದರ್ಭದಲ್ಲಿದ್ದರು.

Related posts

ಕಾರ್ಕಳ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿಶ್ವ ಬೈಸಿಕಲ್ ದಿನ ಆಚರಣೆ

Madhyama Bimba

ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೂ. 01.00 ಕೋಟಿ ವೆಚ್ಚದಲ್ಲಿ 08 ಕಾಲುಸಂಕಗಳ ನಿರ್ಮಾಣಕ್ಕೆ ಸರಕಾರದ ಅನುಮೋದನೆ: ವಿ ಸುನಿಲ್ ಕುಮಾರ್

Madhyama Bimba

ಜೈ ತುಳು ಸಿನಿಮಾದ ಸಂಭಾಷಣೆಗಾಗಿ ಕೋಸ್ಟಲ್ ಫಿಲ್ಮ್ ಅವಾರ್ಡನ್ನು ಮುಡಿಗೇರಿಸಿಕೊಂಡ ಪ್ರಸನ್ನ ಶೆಟ್ಟಿ ಬೈಲೂರು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More