ಕಾರ್ಕಳ

ಅಂಬೇಡ್ಕರ್ ಪ್ರಶಸ್ತಿ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಏ. 5ರಂದು ಹಾಗೂ ಏ. 14ರಂದು ಕ್ರಮವಾಗಿ ರಾಜ್ಯಾದ್ಯಂತ ಡಾ. ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನಾಚರಣೆಗಳನ್ನು ಆಚರಿಸುವ ಹಿನ್ನೆಲೆಯಲ್ಲಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಡಾ. ಬಾಬು ಜಗಜೀವನ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಈ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೊದಲು ಮಾರ್ಚ್ 10 ಎಂದು ನಿಗದಿಪಡಿಸಲಾಗಿದ್ದು, ಇದೀಗ ಅದನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ಮಾರ್ಚ್ 15 ರ ಒಳಗೆ ಕೇಂದ್ರ ಕಚೇರಿ ಅಥವಾ ಸಂಬಂಧಿತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ : ಅರ್ಜಿ ಆಹ್ವಾನ

Madhyama Bimba

ಶ್ರೀಮತಿ ಮಮತಾ ರಾಜು ಹಾಗೂ ಮಂಜುಳಾ ವಿಶ್ವನಾಥ್ ಅವರಿಗೆ ಶಿವಶರಣೆ ಅಕ್ಕಮ್ಮ ರಾಜ್ಯ ಪ್ರಶಸ್ತಿ

Madhyama Bimba

ತ್ರಿಂಶತಿ ಸಂಭ್ರಮದಲ್ಲಿರುವ ಕಾರ್ಕಳದ ರಾಜಾಪುರ ಸಾರಸ್ವತ ಸೊಸೈಟಿಗೆ ರೂ 5.02 ಕೋಟಿ ನಿವ್ವಳ ಲಾಭ ಹಾಗೂ ನೂತನ ವಾಣಿಜ್ಯ ಸಂಕೀರ್ಣದ ಲೋಕಾರ್ಪಣ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More