ಕಾರ್ಕಳ

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಸಹಾಯಧನ: ಅರ್ಜಿ ಆಹ್ವಾನ

ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರೇನ್ಯೂರ್‌ಶಿಪ್ ವಿಷಯದ ಬಗ್ಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಸಲು ಶೇ. 70% ಮೊತ್ತ ಅಥವಾ ಗರಿಷ್ಠ ರೂ. 5.00 ಲಕ್ಷಗಳ ಸಹಾಯಧನ ನೀಡಲಾಗುತ್ತಿದ್ದು ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 04 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳು ಸೇರಿದಂತೆ ಒಟ್ಟು 07 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿದ್ದು, 20 ರಿಂದ 55 ವರ್ಷ ವಯೋಮಿತಿ ಯಲ್ಲಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಉಡುಪಿ ಜಿಲ್ಲೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್, 2 ನೇ ಮಹಡಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574868 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಸ. ಹಿ. ಪ್ರಾ. ಶಾಲೆ ಬಸ್ರಿ ಬೈಲೂರು: ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Madhyama Bimba

ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ

Madhyama Bimba

ಬೈಲೂರು:  ಊರು ಬೋಡು ಪುದರ್ ಬೊಡ್ಚಿ ನಾಟಕದ ಶುಭಮುಹೂರ್ತ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More