ಕಾರ್ಕಳಹೆಬ್ರಿ

ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿ: ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2026-27 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರತಿಷ್ಠಿತ ಶಾಲೆ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಅರ್ಹ ಪರೀಕ್ಷೆಯ ಮೂಲಕ ಪ್ರವೇಶಾವಕಾಶ ಕಲ್ಪಿಸಲು ಅರ್ಹ ವಿದ್ಯಾರ್ಥಿಗಳಿಂದ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2026 ರ ಏಪ್ರಿಲ್15 ರಿಂದ ಮೇ4 ರ ವರೆಗೆ ಕಾಲಾವಕಾಶ ಕಲ್ಪಿಸಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ದಾಖಲಾತಿಗಳನ್ನು ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ. ಸಂಖ್ಯೆ: 0820-2574892 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ ರೋಟರಿ ಕ್ಲಬ್ ಗೆ  ಏ.6ರಂದು ರೋಟರಿ ಜಿಲ್ಲಾ ಗವರ್ನರ್ ಪಾಲಾಕ್ಷ ಭೇಟಿ

Madhyama Bimba

ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ಆಕಸ್ಮಿಕ ಬೆಂಕಿ

Madhyama Bimba

ಎಪ್ರಿಲ್‌ 05 ರಿಂದ 10:  ಮುದ್ರಾಡಿ ಅಭಯಹಸ್ತೆ ಶ್ರೀ ಆದಿಶಕ್ತಿ ಶ್ರೀಕ್ಷೇತ್ರದಲ್ಲಿ ಆದಿಮುದ್ರೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More