ಪ್ರಸ್ತುತ ಕೊಲ್ಲಿ ರಾಷ್ಟ್ರ ಯುದ್ಧದ ಪರಿಣಾಮವಾಗಿ ಉದ್ಭವಿಸಿರುವ ಎಲ್‌ಪಿಜಿ ಸರಬರಾಜು ಬಗ್ಗೆ ಸಮರ್ಪಕವಾದ ಪರಿಹಾರ ಕಂಡು ಕೊಳ್ಳುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಕ್ರಮಗಳನ್ನು ಕೈಗೊಂಡಿರುವುದಾಗಿ ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ.

ರಾಜ್ಯ ಸರ್ಕಾರವು ತೈಲ ಕಂಪನಿ ಅಧಿಕಾರಿಗಳೊಂದಿಗೆ (IOC BPC HPC) ಸಭೆ ನಡೆಸಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆ ಬಗ್ಗೆ ಮಾಹಿತಿ ಪಡೆದು ಸಮಸ್ಯೆ ಇಲ್ಲದ ಬಗ್ಗೆ ತೈಲ ಕಂಪನಿ ಅಧಿಕಾರಿಗಳಿಂದ ಖಾತ್ರಿಪಡಿಸಿಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಪ್ರಸ್ತುತ ಲಭ್ಯವಿರುವ ದೇಶೀಯ ಎಲ್ ಪಿಜಿ ದಾಸ್ತಾನು ಗೃಹಬಳಕೆ ಗ್ರಾಹಕರಿಗೆ ಅಗತ್ಯವಿರುವ ಬಗ್ಗೆ ತೈಲ ಕಂಪನಿಗಳು ಮಾಹಿತಿ ನೀಡಿದ್ದು, ರಾಜ್ಯದ ಎಲ್ಲಾ ಗ್ರಾಹಕರು ಎಲ್ ಪಿಜಿ ಸರಬರಾಜಿನ ಬಗ್ಗೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ತಿಳಿಸಿದೆ. ಗ್ರಾಹಕರು ಆತಂಕದಲ್ಲಿ ತುರ್ತು ಮತ್ತು ಅನಗತ್ಯ ಬುಕಿಂಗ್ ಮಾಡದೆ, ಮಾರುಕಟ್ಟೆಯಲ್ಲಿ ಕೃತಕ ಬೇಡಿಕೆ ಸೃಷ್ಟಿಯಾಗದಂತೆ ಸಮರ್ಪಕವಾಗಿ ಬಳಕೆ ಮಾಡಲು ಸಮತೋಲನ ಕಾಪಾಡಲು ಕೂಡ ತಿಳಿಸಿದೆ.

ಅಗತ್ಯ ಸೇವೆಗಳನ್ನು ಒದಗಿಸುವ ಸಾರ್ವಜನಿಕ ಸಂಸ್ಥೆಗಳಾದ ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿನಿಲಯಗಳು, ಅಂಗನವಾಡಿ, ಶಾಲೆ, ಕಾಲೇಜು, ಕಾರಾಗೃಹ, ಇತ್ಯಾದಿ ಸಂಸ್ಥೆಗಳಿಗೆ ಯಾವುದೇ ಅಡಚಣೆಯಾಗದಂತೆ ಎಲ್‌ಪಿಜಿ ಸೌಲಭ್ಯವನ್ನು ಒದಗಿಸುವಂತೆ ತೈಲಕಂಪನಿಗಳಿಗೆ ಸೂಚನೆಯನ್ನು ನೀಡಲಾಗಿದೆ.

ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ದಾಸ್ತಾನು/ಸಾಗಾಣಿಕೆ/Essential Commodities Act 1955 and Petroleum Products (Maintenance of ProductionStorage and Supply) Order 1999 and LPG Control Order 2000 .
ಈ ಸಂಬಂಧ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಈ ಬಗ್ಗೆ ಕ್ರಮವಹಿಸಲು ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಕಾಳಸಂತೆಕೋರರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜರುಗಿಸಲು ಸಹ ಜಿಲ್ಲಾಡಳಿತಕ್ಕೆ ಸರ್ಕಾರ ನಿರ್ದೇಶನ ನೀಡಿರುವುದಾಗಿ ತಿಳಿಸಿದೆ.
