ಮೂಡುಬಿದಿರೆ

ಮೂಡುಬಿದಿರೆ ಪುರಸಭಾ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಮೂಡುಬಿದಿರೆ ಪುರಸಭಾ ಹಳೆ ಕಟ್ಟಡ ಪ್ರದೇಶದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ವಾಣಿಜ್ಯ ಸಂಕೀರ್ಣವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಪುರಸಭೆ ಆಕರ್ಷಕ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಿದ್ದು, ಟೆಂಡರ್ ಮೂಲಕ ಪಾರದರ್ಶಕವಾಗಿ ಅರ್ಹ ವ್ಯಾಪಾರಿಗಳ ಕೈ ಸೇರಲಿ ಎಂದು ಅಭಿಪ್ರಾಯಪಟ್ಟರು.

ಶಾಸಕ ಉಮಾನಾಥ ಏ ಕೋಟ್ಯಾನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ ಗಫೂರ್ ಮಾಜಿ ಸಚಿವ ಕೆ ಅಭಯಚಂದ್ರ ಜೈನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ನಿಕಟಪೂರ್ವ ಅಧ್ಯಕ್ಷೆ ಜಯಶ್ರೀ ಕೇಶವ್, ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ ಪೂಜಾರಿ, ಮಾಜಿ ಸದಸ್ಯರುಗಳು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಕಂದಾಯ ಅಧಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು

Related posts

ಮೇ 16ರಿಂದ ಸರ್ಕಾರಿ ಶಾಲೆಗಳಲ್ಲಿ  ದಾಖಲಾತಿ ಆಂದೋಲನ

Madhyama Bimba

ಮೂಡುಬಿದಿರೆಯಲ್ಲಿ ನಾಳೆ(ಆದಿತ್ಯವಾರ) ‘ ಗೃಹಲಕ್ಷ್ಮಿ ಕೋಟಿ ಸಂಭ್ರಮ’

Madhyama Bimba

ಸೆಂಟ್ರಲ್ ಎಕ್ಸಿಕ್ಯೂಟಿವ್ ಸದಸ್ಯರಾಗಿ ಶೋಭಾ ಹೆಗ್ಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More