ಕಾರ್ಕಳ

ಕಾಂಗ್ರೆಸ್‌ನ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದ ಬಳಿಕ ಸರ್ಕಾರದ ಆಡಳಿತ ವೈಫಲ್ಯಗಳಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೆಂಪುಕಲ್ಲು ಮತ್ತು ಮರಳು ಸಾಗಾಟಕ್ಕೆ ಸರಿಯಾದ ನೀತಿ ಇಲ್ಲದ ಕಾರಣ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ನಿರ್ಮಾಣ ಕ್ಷೇತ್ರ ಕುಂಠಿತಗೊಂಡಿದ್ದು, ದುಡಿಯುವ ವರ್ಗಕ್ಕೆ ಕೆಲಸವಿಲ್ಲದೆ ಜೀವನ ದುಸ್ತರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ತಾರು ನವೀನ್ ಶೆಟ್ಟಿ ಹೇಳಿದರು.

ಕಾಂಗ್ರೆಸ್‌ನ ಜನ ವಿರೋಧಿ ನೀತಿಯನ್ನು ಖಂಡಿಸಿ ನಂದಳಿಕೆ ಗ್ರಾಮ ಪಂಚಾಯತ್ ಹಾಗೂ ಬೋಳ ಗ್ರಾಮ ಪಂಚಾಯತ್ ಜಂಟಿಯಾಗಿ ಕೆದಿಂಜೆಯಲ್ಲಿ ನಡೆಸಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಬಿಜೆಪಿಯ ಪ್ರಮುಖರಾದ ಸೂರ್ಯಕಾಂತ್ ಶೆಟ್ಟಿ, ಜಯರಾಮ್ ಸಾಲ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಬೋಳ, ದೇವೇಂದ್ರ ಶೆಟ್ಟಿ, ಪ್ರಸಾದ್ ಶೆಟ್ಟಿ ಕಾಡಿಕಂಬಳ, ನಂದಳಿಕೆ ಗ್ರಾಮ ಸಮಿತಿ ಅಧ್ಯಕ್ಷ ರಘುರಾಮ್ ರಾವ್, ಸರ್ವಜ್ಞ ತಂತ್ರಿ, ಸತೀಶ್ ಅಬ್ರನಡ್ಕ, ಆಶಾ ದೇವೇಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Related posts

ಚಿಕ್ಕಲ್‌ಬೆಟ್ಟು ಶಾಲೆಯಲ್ಲಿ ಪುಸ್ತಕ ವಿತರಣೆ

Madhyama Bimba

ಅರ್ಜುನಾಪುರದಲ್ಲಿ ವಿದ್ವಾನ್ ವೇ|| ಮೂ|| ಉಮೇಶ್ ಭಟ್ ಅವರಿಗೆ ಶನಿವಾರ ಸನ್ಮಾನ

Madhyama Bimba

ಕಾರ್ಕಳ ಜೋಡುರಸ್ತೆಯಲ್ಲಿ ಮಾನಸ ಕಂಫರ್ಟ್ಸ್ ಬೋರ್ಡಿಂಗ್ & ಲಾಡ್ಡಿಂಗ್ ಶುಭಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More