ಕಾರ್ಕಳ

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಕಾರ್ಕಳದ 35 ಕಡೆಗಳಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಕರಾವಳಿ ಭಾಗದ ನಿರ್ಲಕ್ಷ್ಯವನ್ನು ಖಂಡಿಸಿ, ಶಾಸಕ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

 

ಬಜಗೋಳಿಯಲ್ಲಿ ಮುಡಾರು ಗ್ರಾಮ ಸಮಿತಿ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶಾಸಕ ವಿ. ಸುನಿಲ್ ಕುಮಾರ್, ರಾಜ್ಯ ಸರ್ಕಾರದ ಆಡಳಿತ ವೈಖರಿಯನ್ನು ತೀವ್ರವಾಗಿ ಟೀಕಿಸಿದರು. ಮೂರು ವರ್ಷಗಳಲ್ಲಿ ನಾಲ್ಕು ಬಜೆಟ್ ಮಂಡಿಸಿದರೂ ಕರಾವಳಿ ಭಾಗಕ್ಕೆ ನಯಾಪೈಸೆಯೂ ಅನುದಾನ ನೀಡಿಲ್ಲ. ಬಿಜೆಪಿ ಆಡಳಿತಾವಧಿಯಲ್ಲಿ ಕಾರ್ಕಳದಲ್ಲಿ ನಡೆದ ಅಭಿವೃದ್ಧಿ ಪರ್ವಕ್ಕೆ ಈಗಿನ ಸರ್ಕಾರ ಬ್ರೇಕ್ ಹಾಕಿದೆ,” ಎಂದು ಕಿಡಿಕಾರಿದರು.

 

ವಿದ್ಯುತ್ ಬಿಲ್ ಗಗನಕ್ಕೇರಿದೆ, ಆರ್.ಟಿ.ಸಿ ದರ ಹೆಚ್ಚಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಡವರಿಗೆ ಆಶ್ರಯ ಮನೆಗಳು ಸಿಗುತ್ತಿಲ್ಲ. ಮರಳು ಸಮಸ್ಯೆಯಿಂದ ಕಟ್ಟಡ ಕಾರ್ಮಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ದೇಗುಲಗಳ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನವನ್ನು ಕಡಿತಗೊಳಿಸಲಾಗಿದೆ ಎಂದು ಅವರು ಆರೋಪಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಮಹಾವೀರ ಹೆಗ್ಡೆ ಮಾತನಾಡಿ, ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಕ್ರೆಡಿಟ್ ಪಡೆಯಲು ನಾಟಕವಾಡುತ್ತಿದ್ದಾರೆ ಎಂದು ಟೀಕಿಸಿದರು. ಪ್ರವಾಸೋದ್ಯಮ ಕ್ಷೇತ್ರಕ್ಕೆ ಹಾನಿ ಮಾಡಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಜನಪ್ರತಿನಿಧಿಗಳು, ಗ್ರಾ.ಪಂ ಸದಸ್ಯರು, ಪಕ್ಷದ ಹಿರಿಯರು, ಹಾಗೂ ಕಾರ್ಯಕರ್ತರು, ಭಾಗವಹಿಸಿದ್ದರು.

Related posts

ಹೆಬ್ರಿ: ಚೈತನ್ಯ ಯುವ ವೃಂದ ವತಿಯಿಂದ ಕ್ರಿಕೆಟ್ ಪಂದ್ಯಾಟ ಚೈತನ್ಯ ಟ್ರೋಫಿ-2026

Madhyama Bimba

ಮಣಿಪಾಲ ಜ್ಞಾನಸುಧಾ: ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಕಾರು ಡಿಕ್ಕಿ- ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More