ಕಾರ್ಕಳಹೆಬ್ರಿ

ಶಿವಪುರ ಶಂಕರದೇವ ದೇವಸ್ಥಾನ : ಸಮಾಲೋಚನಾ ಸಭೆ

ಹೆಬ್ರಿ : ಶಿವಪುರ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಗಳ ಪ್ರಗತಿ ಹಾಗೂ ಗಣಪತಿ, ಅಮ್ಮನವರ ಗರ್ಭಗುಡಿ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಸಮಾಲೋಚನಾ ಸಭೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ವಿಶ್ವನಾಥ ನಾಯಕ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಭಟ್, ಪ್ರಧಾನ ಕಾರ್ಯದರ್ಶಿ ಮೂರ್ಸಾಲು ಗೋಕುಲದಾಸ್ ನಾಯಕ್ ಬ್ರಹ್ಮಕಲಶೋತ್ಸವ ಮತ್ತು ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದರು.

ಸಭೆಯಲ್ಲಿ ಪ್ರಮುಖರಾದ ಮೂರ್ಸಾಲು ಮೋಹನದಾಸ ನಾಯಕ್, ಬಿ.ಚಂದ್ರಶೇಖರ ಶೆಟ್ಟಿ, ಶ್ರೀನಿವಾಸ ಹೆಬ್ಬಾರ್, ಜಗನ್ನಾಥ ಕುಲಾಲ್, ಸಂತೋಷ ಶೆಟ್ಟಿ ನಾಯರಕೋಡು, ಮಹಾಬಲೇಶ್ವರ ಅಡಿಗ, ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು, ವಿವಿಧ ಪದಾಧಿಕಾರಿಗಳು, ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು. ವಿಶ್ವನಾಥ ನಾಯಕ್ ಸ್ವಾಗತಿಸಿದರು.

Related posts

ಕಾರ್ಕಳ: ಕಾರುಗಳ ನಡುವೆ ಅಪಘಾತ- ಗಾಯ

Madhyama Bimba

ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba

ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More