ಕಾರ್ಕಳ

ಕಾರ್ಕಳ: ಸ್ಕೂಟರ್ ತಡೆಗೋಡೆಗೆ ಡಿಕ್ಕಿ- ಸವಾರ ಮೃತ್ಯು

ಕಾರ್ಕಳ: ಸ್ಕೂಟರ್ ರಸ್ತೆ ಬದಿ ತಡೆಗೋಡೆಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಮಾ. 19ರಂದು ವರದಿಯಾಗಿದೆ.

ನಿಟ್ಟೆ ಗ್ರಾಮದ ಹರಿಶ್ಚಂದ್ರ ಗುಡಿಗಾರ್ (62) ಮೃತ್ಯುವಿಗೀಡಾವರು.


ಇವರು ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾಚ್ ಮ್ಯಾನ್ ಕೆಲಸ ಮಾಡುತ್ತಿದ್ದು, ಪಡುಬಿದ್ರೆ ಕಡೆಯಿಂದ ಕಾರ್ಕಳ ಕಡೆಗೆ ತನ್ನ ಸ್ಕೂಟರ್‌ನಲ್ಲಿ ಬರುತ್ತಿರುವಾಗ ಕೆದಿಂಜೆ ಮಾವಿನಕಟ್ಟೆ ಬಳಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ಪರಿಣಾಮ ಇವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಡಾ. ಟಿ.ಎಂ.ಎ ಪೈ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಮೂರ್ತೆದಾರರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Madhyama Bimba

ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ – ಸಾಮಾಜಿಕ ಸೇವಾ ಟ್ರಸ್ಟ್ ಸಭೆ

Madhyama Bimba

ಹೆಬ್ರಿ: ಅವಾಚ್ಯ ಶಬ್ದಗಳಿಂದ ನಿಂದನೆ- ಹಲ್ಲೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More