ಕಾರ್ಕಳಹೆಬ್ರಿ

ಎಸ್.ಎಸ್.ಎಲ್.ಸಿ ತೃತೀಯ ಭಾಷೆ ವಿಷಯದ ಪರೀಕ್ಷೆ ಮಾ. 31 ಕ್ಕೆ ಮರುನಿಗಧಿ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಈಗಾಗಲೇ ಪ್ರಾರಂಭವಾಗಿದ್ದು, ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 30 ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆಯಂತೆ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾರ್ಚ್ 31 ರ ಮಂಗಳವಾರ ಬದಲಾಗಿ ಮಾರ್ಚ್  30ರ ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿರುತ್ತದೆ.

ಈ ಹಿನ್ನೆಲೆ ಮಾರ್ಚ್ 30 ರಂದು ನಿಗಧಿಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ- ತೃತೀಯ ಭಾಷೆ ವಿಷಯದ ಪರೀಕ್ಷೆಯನ್ನು ಮಾರ್ಚ್ 31 ರ ಮಂಗಳವಾರ ಈಗಾಗಲೇ ನಿಗಧಿಪಡಿಸಿರುವ ಅವಧಿಯಲ್ಲಿ ನಡೆಲಾಗುವುದು. ಉಳಿದ ವಿಷಯದ ಪರೀಕ್ಷೆಗಳು ವೇಳಾಪಟ್ಟಿಯಂತೆ ಯಥಾವತ್ತಾಗಿ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಬಜಗೋಳಿಯಲ್ಲಿ ನೂತನ ಫ್ಲೆಕ್ಸ್ ಫ್ಯಾಕ್ಟರಿ ಘಟಕ ಪ್ರಾರಂಭ

Madhyama Bimba

ಇರ್ವತ್ತೂರು ಸರಕಾರಿ ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Madhyama Bimba

ಕಾಂಗ್ರೆಸ್‌ನ ಜನ ವಿರೋಧಿ ನೀತಿಯನ್ನು ಖಂಡಿಸಿ ಬಿಜೆಪಿ ಪ್ರತಿಭಟನಾ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More