ಕಾರ್ಕಳ

ಕಾರ್ಕಳ: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

ಕಾರ್ಕಳ ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವಾರ್ಷಿಕ ವಿಶೇಷ ಶಿಬಿರವು ಶ್ರೀ ರಾಮಪ್ಪ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ನಡೆಯಿತು.

ಶಿಬಿರದ ಉದ್ಘಾಟನೆಯನ್ನು ಎಸ್.ವಿ ಎಜ್ಯುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಯವರಾದ ಕೆ.ಪಿ ಶೆಣೈ ನೆರವೇರಿಸಿದರು.

ಶ್ರಮದಾನದ ಉದ್ಘಾಟನೆಯನ್ನು ಎಸ್.ವಿ ಎಜ್ಯುಕೇಶನ್ ಟ್ರಸ್ಟ್‌ನ ಕೋಶಾಧ್ಯಕ್ಷರಾದ ಐ ರವೀಂದ್ರನಾಥ ಪೈ ನೆರವೇರಿಸಿದರು.

ಭಿತ್ತಿ ಪತ್ರದ ಉದ್ಘಾಟನೆಯನ್ನು ಶ್ರೀ ರಾಮಪ್ಪ ಶಾಲೆಯ ಮುಖ್ಯೋಪಾಧ್ಯಾಯರಾದ ಹರೀಶ್ ಕುಮಾರ್ ಶೆಟ್ಟಿ ಇವರು ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ರೆಡ್‌ಕ್ರಾಸ್‌ನ ಕಾರ್ಯದರ್ಶಿ, ಡಾ| ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಎನ್.ಎಸ್.ಎಸ್‌ನ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಗಣನಾಥ ಎಕ್ಕಾರು ಇವರು ಎನ್.ಎಸ್.ಎಸ್ ಬಗ್ಗೆ ಮಾಹಿತಿಯನ್ನು ಶಿಬಿರಾರ್ಥಿಗಳಿಗೆ ನೀಡಿದರು.

ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಗೀತಾ. ಜಿ ಯವರು ಅಧ್ಯಕ್ಷತೆಯನ್ನು ವಹಿಸಿದ್ದರು.
ವೇದಿಕೆಯಲ್ಲಿ ಶ್ರೀ ರಾಮಪ್ಪ ಎಜ್ಯುಕೇಷನ್ ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀಧರ ಸುವರ್ಣ, ನಿವೃತ್ತ ಮುಖ್ಯ ಶಿಕ್ಷಕರಾದ ಎಂ. ವಸಂತ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿಜೇತ ಕುಮಾರಿ ಸ್ವಾಗತಿಸಿದರು. ಕು. ಮಂಜುಳ ಕಾರ್ಯಕ್ರಮ ನಿರೂಪಿಸಿದರು. ಕು. ಅಮೃತ ವಂದಿಸಿದರು.

 

 

Related posts

ಸರ್ಕಾರಿ ಪ್ರೌಢಶಾಲೆ ಶಿವಪುರ ಶೇಕಡ 100 ಫಲಿತಾಂಶ

Madhyama Bimba

ಹೆಬ್ರಿ ತಾಲ್ಲೂಕಿನಾದ್ಯಂತ ಭಾರಿ ಗಾಳಿ ಮಳೆ : ನೂರಾರು ಮರಗಳು, ವಿದ್ಯುತ್ ಕಂಬಗಳು ಧರಗೆ : ಕೃಷಿಗೆ ಅಪಾರ ನಷ್ಟ !

Madhyama Bimba

ಕ್ರೈಸ್ಟ್‌ಕಿಂಗ್: ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More